"ಇಂಡಿಯಾ ಬುಕ್ ಆಫ್ ರೆಕಾರ್ಡ್" ಗೌರವಕ್ಕೆ ಪಾತ್ರರಾದ ಡಾ. ಹರ್ಷಕುಮಾರ ರೈ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

"ಇಂಡಿಯಾ ಬುಕ್ ಆಫ್ ರೆಕಾರ್ಡ್" ಗೌರವಕ್ಕೆ ಪಾತ್ರರಾದ ಡಾ. ಹರ್ಷಕುಮಾರ ರೈ

Share This
ಬೆಂಗಳೂರು: ಜನ್ಮ ಕ್ರಿಯೆಷನ್ಸ್ ಲಾಂಛನದಲ್ಲಿ ದಕ್ಷಿಣ ಭಾರತದ ಎಂಟು ಪುಣ್ಯಕ್ಷೇತ್ರಗಳ ಕನ್ನಡ ಭಕ್ತಿಗೀತೆಗಳ ಧ್ವನಿಸುರುಳಿ ಅಷ್ಟ ಕ್ಷೇತ್ರ ಗಾನ ವೈಭವ ಇತ್ತೀಚೆಗೆ ಜಗತ್ತಿನ ಎಂಟು ರಾಷ್ಟ್ರಗಳಲ್ಲಿ ಬಿಡುಗಡೆಗೊಂಡು ಧಾರ್ಮಿಕ ಹಾಗೂ ಕನ್ನಡ ಭಕ್ತಿಗೀತೆಗಳ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿ ಇದೀಗ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ಗೌರವಕ್ಕೆ ಪಾತ್ರವಾಗಿದೆ.

ಖ್ಯಾತ ಆಧ್ಯಾತ್ಮಿಕ ಗುರು ಆರ್ಟ್ ಆಫ್ ಲಿವಿಂಗ್ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಧ್ವನಿಸುರುಳಿಯ ನಿರ್ಮಾಪಕ ಪುತ್ತೂರಿನ ಡಾ. ಹರ್ಷಕುಮಾರ ರೈ ಮಾಡಾವು ಅವರಿಗೆ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ಪ್ರಮಾಣ ಪತ್ರ ಮತ್ತು ಸ್ಮರಣಿಕೆಯನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಹಸ್ತಾಂತರಿಸಿದರು.
ಖ್ಯಾತ ಗಾಯಕರಾದ ಪುತ್ತೂರು ನರಸಿಂಹ ನಾಯಕ್ ಹಾಗೂ ಸುರೇಖಾ ಕೆ.ಎಸ್ ಹಾಡಿರುವ ಭಕ್ತಿಗೀತೆಗಳಿಗೆ ಪುತ್ತೂರು ಉಮೇಶ್ ನಾಯಕ್ ಸಾಹಿತ್ಯ ನೀಡಿದ್ದಾರೆ. ಧ್ವನಿಸುರುಳಿಯಲ್ಲಿ ತಿರುಪತಿ, ಪೊಳಲಿ, ಶಬರಿಮಲೆ, ಸುಬ್ರಹ್ಮಣ್ಯ, ಕಟೀಲು, ಧರ್ಮಸ್ಥಳ, ಕೊಲ್ಲೂರು ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಸಂಬಂಧಿಸಿದ ಹಾಡುಗಳಿವೆ. ಅಮೇರಿಕಾ, ಇಂಗ್ಲೇಡ್, ಆಸ್ಟ್ರೇಲಿಯಾ, ದುಬೈ, ಕತಾರ್, ಅಬುದಾಬಿ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಧ್ವನಿಸುರುಳಿ ಬಿಡುಗಡೆಗೊಂಡಿತ್ತು.

Pages