BUNTS NEWS, ಉಡುಪಿ: ಉಡುಪಿಯ ಸರ್ಕಾರಿ ಆಸ್ಪತ್ರೆಯನ್ನು ಅಭಿವೃದ್ದಿಗೊಳಿಸುವ
ಉದ್ದೇಶದಿಂದ ಖ್ಯಾತ ಉದ್ಯಮಿ ಡಾ.ಬಿ.ಆರ್ ಶೆಟ್ಟಿ ಅವರಿಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.
ಈ ಸಂಬಂಧ ಬುಧವಾರ
ಸಿ.ಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸಭೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನಕ್ಕೆ
ಬರಲಾಗಿದೆ ಎನ್ನಲಾಗಿದೆ. ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿಯ ಜತೆಗೆ ಸಮೀಪದಲ್ಲಿ 400 ಹಾಸಿಗೆಯುಳ್ಳ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು ಸರ್ಕಾರ ಸಮ್ಮಿತಿ ಸೂಚಿಸಿದ್ದು 30 ವರ್ಷಗಳ ಗುತ್ತಿಗೆ ಆಧಾರದಲ್ಲಿ
ಡಾ.ಬಿ.ಆರ್ ಶೆಟ್ಟಿ ಸಂಸ್ಥೆ ಕಾರ್ಯನಿರ್ವಹಿಸಲಿದೆ.
ಸರ್ಕಾರಿ ಆಸ್ಪತ್ರೆಯ
ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿನ ಒಟ್ಟು 400 ಹಾಸಿಗೆಗಳಲ್ಲಿ
200 ಹಾಸಿಗೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಲಭಿಸಲಿದೆ ಎನ್ನಲಾಗಿದೆ. ಈ ಮೂಲಕ ಸರ್ಕಾರಿ ಹಾಗೂ
ಖಾಸಗಿ ಒಡೆತನದಲ್ಲಿ ಆಸ್ಪತ್ರೆ ಸೇವೆ ಸಲ್ಲಿಸಲಿದೆ.