ರಾಷ್ಟ್ರೀಯ ಅಥ್ಲೆಟಿಕ್‌ ಚಾಂಪಿಯನ್‌ ಷಿಪ್‌ನಲ್ಲಿ ಚಿನ್ನ ಗೆದ್ದ ಅಭಿಷೇಕ್ ಶೆಟ್ಟಿ, ಅಶ್ವಿನಿ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ರಾಷ್ಟ್ರೀಯ ಅಥ್ಲೆಟಿಕ್‌ ಚಾಂಪಿಯನ್‌ ಷಿಪ್‌ನಲ್ಲಿ ಚಿನ್ನ ಗೆದ್ದ ಅಭಿಷೇಕ್ ಶೆಟ್ಟಿ, ಅಶ್ವಿನಿ ಶೆಟ್ಟಿ

Share This
BUNTS NEWS,ಕ್ರೀಡೆ: ಲಖನೌನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಥ್ಲೆಟಿಕ್ಚಾಂಪಿಯನ್ಷಿಪ್ನಲ್ಲಿ ಅಭಿಷೇಕ್ ಶೆಟ್ಟಿ ಹಾಗೂ ಅಶ್ವಿನಿ ಚಿದಾನಂದ ಶೆಟ್ಟಿ ಅಕ್ಕುಂಜೆ ಅವರು ಚಿನ್ನದ ಪದಕ ಪಡೆದಿದ್ದಾರೆ.
ಉಡುಪಿಯ ಸಿದ್ಧಾಪುರದ ಅಶ್ವಿನಿ ಅಕ್ಕುಂಜಿ ರಾಷ್ಟ್ರೀಯ ಅಥ್ಲೆಟಿಕ್ಚಾಂಪಿಯನ್ಷಿಪ್ನಲ್ಲಿ 400 ಮೀಟರ್ಸ್ದೂರವನ್ನು 53.25 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಇತ್ತಿಚೇಗೆ ನಡೆದಿದ್ದ ರಿಯೋ ಒಲಿಂಪಿಕ್ಸ್’ನಲ್ಲಿ ನಮ್ಮ ದೇಶದ ರಿಲೆ ತಂಡವನ್ನು ಇವರು ಪ್ರತಿನಿಧಿಸಿದ್ದರು. ಅಶ್ವಿನಿ ಅವರು ಈಗಾಗಲೇ ರಾಷ್ಟ್ರ – ಅಂತರಾಷ್ಟ್ರೀಯ ಮಟ್ಟದಲ್ಲಿ ಅನೇಕ ಪದಕಗಳನ್ನು ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಭಿಷೇಕ್ ಶೆಟ್ಟಿ ಅವರು ರಾಷ್ಟ್ರೀಯ ಅಥ್ಲೆಟಿಕ್ಚಾಂಪಿಯನ್ಷಿಪ್ನಲ್ಲಿ ಡೆಕಥ್ಲಾನ್ಸ್ವರ್ಧೆಯಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಪಡೆದಿದ್ದಾರೆ. ಡೆಕಥ್ಲಾನ್ಸ್ಪರ್ಧೆಯಲ್ಲಿ ಒಟ್ಟು 6,991 ಪಾಯಿಂಟ್ಸ್ಗಳನ್ನು ಪಡೆಯುವ ಮೂಲಕ ಅಭಿಷೇಕ್ ಚಿನ್ನ ಗೆದ್ದಿದ್ದಾರೆ. ರೈಲ್ವೇ ತಂಡವನ್ನು ಪ್ರತಿನಿಧಿಸುತ್ತಿರುವ ಇವರು ಕಳೆದ ಭಾರಿಯು ಚಿನ್ನ ಪಡೆದಿದ್ದರು.  © www.buntsnews.com
------------------------------------------------------------------------------------------------------------------------

Pages