ವೇದ ಕಾಲದಿಂದಲೇ ಗಣೇಶನ ಆರಾಧನೆ : ಡಾ|ಎ.ವಿ.ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವೇದ ಕಾಲದಿಂದಲೇ ಗಣೇಶನ ಆರಾಧನೆ : ಡಾ|ಎ.ವಿ.ಶೆಟ್ಟಿ

Share This
BUNTS NEWS, ಮಂಗಳೂರು: ವೇದ ಕಾಲದಿಂದಲೇ ಶ್ರೀ ಗಣೇಶನ ಆರಾಧನೆ ನಡೆಯುತ್ತಿದ್ದು, ಸಾರ್ವಜನಿಕವಾಗಿ ಶ್ರೀ ಗಣೇಶನನ್ನು ಪೂಜಿಸುವುದರಿಂದ ಸಮಾಜದ ಐಕ್ಯತೆ ಸಾಧ್ಯ ಎಂದು ಎಂದು ಮಂಗಳೂರಿನ ಹಿರಿಯ ಹೃದ್ರೋಗ ತಜ್ಞ ಡಾ|.ವಿ.ಶೆಟ್ಟಿ ಅವರು ಅಭಿಪ್ರಾಯಪಟ್ಟರು.
ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಓಂಕಾರನಗರದಲ್ಲಿ 3 ದಿನಗಳ ಕಾಲ ನಡೆಯುವ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನಡೆದ ತೆನೆಹಬ್ಬದಲ್ಲಿ ಸಾಂಕೇತಿಕವಾಗಿ ತೆನೆ ವಿತರಿಸಿ ಅವರು ಮಾತನಾಡಿದರು.

ಸನಾತನವಾದ ಹಿಂದೂ ಧರ್ಮ ಅತ್ಯಂತ ಶ್ರೇಷ್ಟ ಧರ್ಮವಾಗಿದ್ದು, ಹಿಂದೂಗಳು ಕ್ಷಮಾಗುಣ ಸಂಪನ್ನರು ಎಂದು ಅವರು ಹೇಳಿದರುಉದ್ಯಮಿ, ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷ ಎಮ್. ದೇವಾನಂದ ಶೆಟ್ಟಿ ಅವರು ಗಣೇಶೋತ್ಸವ ಉದ್ಘಾಟಿಸಿ, ಶುಭ ಹಾರೈಸಿದರು.
ಧ್ವಜಾರೋಹಣ ನೆರವೇರಿಸಿದ ಕರ್ನಲ್ ರಮೇಶ್ ಶೆಟ್ಟಿ ಅವರು ಮಾತನಾಡಿ, ದೇಶಸೇವೆ ಸರ್ವ ಶ್ರೇಷ್ಟ ಸೇವೆಯಾಗಿದೆಅಪೂರ್ವ ನಾಯಕತ್ವದ ಗುಣ ಹೊಂದಿರುವ ಬಂಟರು ಶೃದ್ಧಾಭಕ್ತಿಯಿಂದ ಹಾಗೂ ವ್ಯವಸ್ಥಿತ ರೀತಿಯಲ್ಲಿ ಗಣೇಶೋತ್ಸವವನ್ನು ಆಯೋಜಿಸುತ್ತಿರುವುದು ಅಭಿನಂದನೀಯ ಎಂದರು.

ವತ್ಸಲಾ ಆರ್.ಶೆಟ್ಟಿ, ಚಂದ್ರಲೇಖ .ಶೆಟ್ಟಿ, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ಚೇಳ್ಯಾರುಗುತ್ತು, ಕೋಶಾಧಿಕಾರಿ ಕೃಷ್ಣರಾಜ ಸುಲಾಯ, ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಕೃಷ್ಣ ಪ್ರಸಾದ್ ರೈ, ಡಾ|ಆಶಾಜ್ಯೋತಿ ರೈಬಾಲಕೃಷ್ಣ ಶೆಟ್ಟಿ ಬೆಳ್ಳಿ ಬೆಟ್ಟು ಗುತ್ತು, ರವಿರಾಜ ಶೆಟ್ಟಿ ನಿಟ್ಟೆ ಗುತ್ತು, ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ್ ಶೆಟ್ಟಿ, ಕೋಶಾಧಿಕಾರಿ ಸಿಎ ಮನಮೋಹನ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನದ ಆಡಳಿತ ಟ್ರಸ್ಟಿ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದರುಸತೀಶ್ ಶೆಟ್ಟಿ ಕೊಡಿಯಾಲ್ಬೈಲ್ ಕಾರ್ಯಕ್ರಮ ನಿರ್ವಹಿಸಿದರುಸಮಿತಿಯ ಜೊತೆ ಕಾರ್ಯದರ್ಶಿ ಶಶಿರಾಜ್ ಶೆಟ್ಟಿ ಕೊಳಂಬೆ ವಂದಿಸಿದರು.

ವರದಿ: ಜಗನ್ನಾಥ ಶೆಟ್ಟಿ ಬಾಳ

Pages