ಸಂಪಾದಕ ಕೆ.ಎಸ್. ಭಾಸ್ಕರ್ ಶೆಟ್ಟಿ ಹಾಗೂ ಪ್ರಕಾಶಕಿ ಲತಾ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸಂಪಾದಕ ಕೆ.ಎಸ್. ಭಾಸ್ಕರ್ ಶೆಟ್ಟಿ ಹಾಗೂ ಪ್ರಕಾಶಕಿ ಲತಾ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

Share This
BUNTS NEWS, ಬೆಂಗಳೂರು: ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆಯ ನಡೆದ  ಕಾರ್ಯಕ್ರಮದಲ್ಲಿ ಸುವರ್ಣ ಟೈಮ್ಸ್ ಆಫ್ ಕರ್ನಾಟಕ' ದಿನಪತ್ರಿಕೆ, `ಟೈಮ್ಸ್ ಆಫ್ ಕರ್ನಾಟಕ' ವಾರಪತ್ರಿಕೆಯ ಪ್ರಧಾನ ಸಂಪಾದಕರಾದ ಕೆ.ಎಸ್. ಭಾಸ್ಕರ್ ಶೆಟ್ಟಿ ಹಾಗೂ ಪ್ರಕಾಶಕಿ ಲತಾ ಭಾಸ್ಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಖ್ಯಾತ ಲೇಖಕ ಆರ್.ಜಿ. ಹಳ್ಳಿ ನಾಗರಾಜ್ ಅವರ `ಹೆದ್ದಾರಿ ಕವಲು'(ಅಂಕಣ ಬರಹ) ಕೃತಿಯನ್ನು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಬುಧವಾರ ಸಂಜೆ ಕನ್ನಡ ಜನಶಕ್ತಿ ಕೇಂದ್ರ, ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ `ಸುವರ್ಣ ಟೈಮ್ಸ್ ಆಫ್ ಕರ್ನಾಟಕ' ದಿನಪತ್ರಿಕೆ, `ಟೈಮ್ಸ್ ಆಫ್ ಕರ್ನಾಟಕ' ವಾರಪತ್ರಿಕೆಯ ಪ್ರಧಾನ ಸಂಪಾದಕರಾದ ಕೆ.ಎಸ್. ಭಾಸ್ಕರ್ ಶೆಟ್ಟಿ ಹಾಗೂ ಪ್ರಕಾಶಕಿ ಲತಾ ಭಾಸ್ಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸಂದರ್ಭದ ಕಸಾಪ ಅಧ್ಯಕ್ಷ ಡಾ. ಮನುಬಳಿಗಾರ್, ಕವಿ ಬಿ.ಆರ್. ಲಕ್ಷ್ಮಣ್ರಾವ್, ಕಸಾಪ ಗೌರವಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ ರಾಮೇಗೌಡ ಉಪಸ್ಥಿತರಿದ್ದರು.

-------------------------------------------------------------------------------------------------------------------------

Pages