ವಿಶ್ವ ತುಳು ಆಯನೊದಲ್ಲಿ ಅಪಾರ ಮೆಚ್ಚುಗೆ ಗಳಿಸಿದ ‘ಅಪ್ಪೆನ ತ್ಯಾಗ’ ನಾಟಕ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಶ್ವ ತುಳು ಆಯನೊದಲ್ಲಿ ಅಪಾರ ಮೆಚ್ಚುಗೆ ಗಳಿಸಿದ ‘ಅಪ್ಪೆನ ತ್ಯಾಗ’ ನಾಟಕ

Share This
ಬಂಟ್ಸ್ ನ್ಯೂಸ್.ಕಾಂ, ಕಾಸರಗೋಡು: ಬದಿಯಡ್ಕದಲ್ಲಿ  ನಡೆದ ವಿಶ್ವ ತುಳು ಆಯೆನೊದಲ್ಲಿ ಅನಿವಾಸಿ ಭಾರತೀಯ ಕಲಾವಿದರಿಂದ “ಅಪ್ಪೆನ ತ್ಯಾಗ” ಎಂಬ ತುಳು ಕಿರುನಾಟಕ ಪ್ರದರ್ಶನಗೊಂಡಿತು. www.buntsnews.com

ಅನಿವಾಸಿ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿರವರು ರಚಿಸಿ ನಿರ್ದೇಶನದ ಜತೆ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಈ ಕಿರುನಾಟಕದಲ್ಲಿ ತಾಯಿಯ ಪ್ರೀತಿ ಮತ್ತು ತ್ಯಾಗ ಎಷ್ಟೊಂದು ಶ್ರೇಷ್ಠ ಎನ್ನುವುದು ಸಮಾಜಕ್ಕೆ ತೋರಿಸಿಕೊಡುವ ಪ್ರಯತ್ನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. www.buntsnews.com

ಈಗಾಗಲೇ ದುಬೈ ಮತ್ತು ಅಬುದಾಬಿಯಲ್ಲಿ ಪ್ರದರ್ಶನಗೊಂಡ ಈ ನಾಟಕದಲ್ಲಿ ಜಯರಾಮ ರೈ ಸೇರಿದಂತೆ ಸುವರ್ಣ ಸತೀಶ್, ಸಂಪತ್ ಶೆಟ್ಟಿ, ಸುರೇಖಾ ಶೆಟ್ಟಿ ಮೊದಲಾದ ಯುಎಇ ಕಲಾವಿದರು ಪಾತ್ರ ವಹಿಸಿದ್ದಾರೆ. ಈ ಸಂದರ್ಭ ವಿಶ್ವ ತುಳು ಆಯೆನೊದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಹಾಗೂ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಧರ್ಮಪಾಲ ದೇವಾಡಿಗ  ಕಲಾವಿದರೆಲ್ಲರನ್ನು ಗೌರವಿಸಿ ತುಳು ಭಾಷೆಯ ಕಾಳಜಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. www.buntsnews.com

Pages