ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

Share This
ಬಂಟ್ಸ್ ನ್ಯೂಸ್ ವಲ್ಡ್, ಮಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಸಮಾರಂಭ ಬೆಂಗಳೂರಿನ ವಸಂತ ನಗರದ  ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜರಗಿದ್ದು . ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆಗಾಗಿ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಸ್ವೀಕರಿಸಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ಧರಾಮ, ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ ಎಸ್ ಹರ್ಷ, ಸಾಹಿತಿ  ಬರಗೂರು ರಾಮಚಂದ್ರಪ್ಪ, ಅಕಾಡೆಮಿ ಕಾರ್ಯದರ್ಶಿ ಎಸ್ ಶಂಕರಪ್ಪ, ಹಾಗೂ ನಿವೃತ ಅಧಿಕಾರಿ  ರವೀಂದ್ರನಾಥ ಠಾಗೂರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ  ಜಿಲ್ಲೆಯಿಂದ ಜಗನ್ನಾಥ ಶೆಟ್ಟಿ ಬಾಳ, ಸ್ಟಾನ್ಲಿ ಪಿಂಟೋ , ಡಾ.ಯು.ಪಿ ಶಿವಾನಂದ ಸೇರಿದಂತೆ ರಾಜ್ಯದಿಂದ ಒಟ್ಟು 45 ಮಂದಿ ಪತ್ರಕರ್ತರಿಗೆ ಬಾರಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.

Pages