ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ

Share This
ಬಂಟ್ಸ್ ನ್ಯೂಸ್ ವಲ್ಡ್, ಮಂಗಳೂರು: ನಗರದ ಬಂಟ್ಸ್ ಹಾಸ್ಟೇಲ್’ನಲ್ಲಿ ನಡೆದ ಜಾಗತಿಕ ಬಂಟರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಹಿಂದೆ ಉಪಾಧ್ಯಕ್ಷರಾಗಿದ್ದ ಐಕಳ ಹರೀಶ್ ಶೆಟ್ಟಿಯವರನ್ನು ಸಭೆಯು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು.
ಐಕಳ ಹರೀಶ್ ಶೆಟ್ಟಿಯವರು ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಇವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಲವು ಸಮಾಜಮುಖಿ ಕೆಲಸವನ್ನು ಮಾಡಿರುತ್ತಾರೆ. ಇಂದು ಅಧಿಕಾರ ವಹಿಸಿಕೊಂಡ ಹರೀಶ್ ಶೆಟ್ಟಿಯವರು ಮಾತನಾಡುತ್ತಾ ಎಲ್ಲಾ ಬಂಟರ ಸಂಘಗಳನ್ನು ಒಗ್ಗೂಡಿಸಿ, ಮುಖಾಂತರ ಸಮಾಜದಲ್ಲಿರುವ ಹಿಂದುಳಿದವರ ಏಳಿಗೆಗೆ ಶ್ರಮಿಸುವುದಾಗಿ ಹೇಳಿದರು.

ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ ಕುಮಾರ್ ರೈ ಅವರು ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಿದರು. ಸಭೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ವಿಜಯ್ ಪ್ರಸಾದ್ ಆಳ್ವ, ಜೊತೆ ಕಾರ್ಯದರ್ಶಿ ಇಂದ್ರಾಳಿ ಜಯಕರ್ ಶೆಟ್ಟಿ, ಕೋಶಾಧಿಕಾರಿ ಬಾಲಕೃಷ್ಣ ರೈ ಕೊಲ್ಲಾಡಿ, ಬಂಟರ ಜಾಗತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪದ್ಮನಾಭ ಪಯ್ಯಡೆ, ಮಾಜಿ ಅಧ್ಯಕ್ಷರಾದ ಸಿ..ಶಂಕರ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಜಯರಾಮ್ ಸಾಂತ, ನವೀನ್ ಚಂದ್ರ ಶೆಟ್ಟಿ ಪಡುಬಿದ್ರೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು ಮುಂತಾದವರು ಉಪಸ್ಥಿತರಿದ್ದರು.

Pages