ವಿಶ್ವ ಬಂಟರ ಸಮ್ಮಿಲನದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಶ್ವ ಬಂಟರ ಸಮ್ಮಿಲನದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಸನ್ಮಾನ

Share This
ಬಂಟ್ಸ್ ನ್ಯೂಸ್ ವಲ್ಡ್, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷನಾಗಿ ಇಂದಿಗೆ ಕೆಲವೇ ಕೆಲವು ದಿನಗಳು ಕಳೆದಿವೆ. ನನ್ನ ಮನದಲ್ಲಿದ್ದ ಯೋಚನೆ- ಯೋಜನೆಗಳು ಇಷ್ಟೊಂದು ವೇಗದಲ್ಲಿ ಮುಟ್ಟುವುದೆಂಬ ಕಲ್ಪನೆಯೇ ನನ್ನಲ್ಲಿರಲಿಲ್ಲ. ವಿಶ್ವ ಬಂಟರ ಸಮ್ಮಿಲನ -2018 ಐತಿಹಾಸಿಕ ದಾಖಲೆಯಾಗಿ ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂಬ ತೃಪ್ತಿ ತನಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಮುಂಬಯಿಯ ಕುರ್ಲಾ ಪೂರ್ವ ಬಂಟರಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದ ಮುನಿಯಾಲು ಉದಯಕೃಷ್ಣ  ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವೇದಿಕೆಯಲ್ಲಿ ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ಆಶ್ರಯದಲ್ಲಿ ಜರಗಿದ ವಿಶ್ವ ಬಂಟರ ಸಮ್ಮಿಲನ 2018 ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭದಲ್ಲಿ  ವಿಶ್ವದಾದ್ಯಂತ ಇರುವ ಬಂಟರು ಭಾಗವಹಿಸಿದ್ದರು. ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿ ಮತ್ತು ಅವರ ಪತ್ನಿ ಚಂದ್ರಿಕಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

Pages