ಮಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಜೆಪಿ ಮಾ.3ರಿಂದ
6ರ ವರೆಗೆ ನಡೆಸುತ್ತಿರುವ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆಯ ಸಮಾರೋಪಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ
ಯೋಗಿ ಆದಿತ್ಯನಾಥ್ ಮಂಗಳೂರಿಗೆ ಆಗಮಿಸಲಿದ್ದಾರೆ.
ಮಾ.6ರಂದು ನಗರದ
ಕೇಂದ್ರ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಸಮಾರೋಪ ಭಾಷಣ ಮಾಡಲಿದ್ದಾರೆ.
ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಹಾಗೂ ಉತ್ತರ
ಕನ್ನಡದ ಅಂಕೋಲಾದಿಂದ ಜನಸುರಕ್ಷಾ ಯಾತ್ರೆ ಆರಂಭವಾಗಲಿದ್ದು ಮಾ.6ರಂದು ಮಂಗಳೂರು ತಲುಪಲಿದೆ.