94ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕಾರ: ಪುತ್ತಿಗೆ ವಿಎ ಬಂಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

94ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕಾರ: ಪುತ್ತಿಗೆ ವಿಎ ಬಂಧನ

Share This
ಮಂಗಳೂರು: 94 ಸಿ ಅಡಿ ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
Corruption puttige village accountant arrested
ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮಹಿಳೆಯೊಬ್ಬರ ದೂರಿನ ಮೇರೆಗೆ, ಪುತ್ತಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಮಹಿಳೆಯಿಂದ  5000 ರೂ, ಲಂಚದ ಹಣವನ್ನು ಸ್ವೀಕರಿಸುವಾಗ ಎಪ್ರಿಲ್ 5 ರಂದು ಎಸಿಬಿ ಪೊಲೀಸರಿಗೆ  ರೆಡ್ ಹಾಂಡ್ ಆಗಿ ಟ್ರ್ಯಾಪ್ ಆಗಿರುತ್ತಾರೆ.

ಮಹಿಳೆಯು 94-ಸಿ ಅಡಿಯಲ್ಲಿ ಜಾಗ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದು ಸುಮಾರು ಒಂದೂವರೆ  ವರ್ಷ ಆದರೂ ಅವರ ಅರ್ಜಿಯನ್ನು ಗ್ರಾಮ ಲೆಕ್ಕಾಧಿಕಾರಿಯವರು ಬಾಕಿ ಇಟ್ಟುಕೊಂಡು ಪ್ರತಿ ಸಲ ಹೋಗಿ ಕೇಳಿದಾಗ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಕಾಲ ವಿಳಂಬ ಮಾಡಿದ್ದರು. ಅರ್ಜಿದಾರರಿಂದ ಈ ಹಿಂದೆ ರೂ 3,000 ಕೆಲಸದ ಪ್ರಯುಕ್ತ ಲಂಚ ಪಡೆದಿದ್ದರು.

ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕಿ ಶೃತಿ ಎನ್. ಎಸ್.,  ಇವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್‍ಪಿ ಸುಧೀರ್ ಎಂ ಹೆಗಡೆ ಇವರ ನೇತ್ರೃತ್ವದ ತಂಡದಲ್ಲಿ ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ, ಸಿಬ್ಬಂದಿಯವರಾದ  ಹರಿಪ್ರಸಾದ್  ಉಮೇಶ್, ರಾಧಕೃಷ್ಣ, ಪ್ರಶಾಂತ್, ರಾಧಕೃಷ ಡಿ.ಎ, ವೈಶಾಲಿ,  ರಾಕೇಶ್, ಗಣೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

Pages