ಮಂಗಳೂರು: ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಕೃತಿ ಅವಿಭಜಿತ
ದಕ್ಷಿಣ ಕನ್ನಡ ಜಿಲ್ಲೆಯ 1952ರಿಂದ 2014 ರವರೆಗಿನ
ರಾಜಕೀಯ ಚುನಾವಣಾ
ಮಾಹಿತಿ ಕೋಶ ‘ರಾಜನೋಟ‘ ಇದರ ಬಿಡುಗಡೆ ಸಮಾರಂಭ ಎ.20ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ
ನಡೆಯಲಿದೆ.
ಆಕೃತಿ ಆಶಯ ಪಬ್ಲಿಕೇಷನ್ಸ್
ಪ್ರಕಟಿಸಿರುವ ಈ ಕೃತಿಯನ್ನು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ.ಎಂ.ಮೋಹನ
ಆಳ್ವ ಬಿಡುಗಡೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು
ಪ್ರಕಟಣೆ ತಿಳಿಸಿದೆ.