ಗೋ ಕಳ್ಳರ ಬಂಧನಕ್ಕೆ ಸಂಸದ ನಳಿನ್ ಆಗ್ರಹ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಗೋ ಕಳ್ಳರ ಬಂಧನಕ್ಕೆ ಸಂಸದ ನಳಿನ್ ಆಗ್ರಹ

Share This
ಮಂಗಳೂರು: ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಿಂದ ಗೋ ಕಳ್ಳತನ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಸಂಸದ ನಳಿನ್ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
Mp nalin kumar kateel demand ಗೋ ಕಳ್ಳರ ಬಂಧನಕ್ಕೆ ಸಂಸದ ನಳಿನ್ ಆಗ್ರಹ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದು ವರ್ಷದಿಂದ ರಾಜಾರೋಷವಾಗಿ ಗೋ ಕಳ್ಳತನ ನಡೆಯುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಗೋಕಳ್ಳತನವಾಗಿದೆಗೋ  ಹಂತಕರಿಗೆ ಕಾಂಗ್ರೆಸ್ ಸಚಿವರ ನೇರ  ಬೆಂಬಲ ಇರುವ ಕಾರಣ ಆರೋಪಿಗಳನ್ನು  ಬಂಧಿಸಲು ಪೆÇಲೀಸರು ವಿಫಲರಾಗಿದ್ದಾರೆ. ಅಮೃತಧಾರಾ ಗೋಶಾಲೆಯಿಂದ ಗೋ ಕಳ್ಳತನ ನಡೆದಿರುವ ಬಗ್ಗೆ  ಗೋ ಶಾಲೆ ಸಮಿತಿಯ ಅಧ್ಯಕ್ಷ ಟಿ.ಜಿ.ರಾಜರಾಮ ಭಟ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೊ ಹಂತಕರಿಂದಾಗಿ ಜಿಲ್ಲೆಯಲ್ಲಿ ಭಯಾನಕ ಸ್ಥಿತಿ ನಿರ್ಮಾಣವಾಗಿದೆ. ತಲವಾರು ತೋರಿಸಿ ದನಗಳನ್ನು ಕದ್ದೊಯ್ಯುವ ಪ್ರಕರಣ ಸಾಮಾನ್ಯವಾಗಿದೆ. ಜಿಲ್ಲೆಯ ಸಚಿವರುಗಳು ಇದುವರೆಗೆ ಗೋ ಕಳ್ಳತನದ ಬಗ್ಗೆ ಯಾವುದೇ ಹೇಳಿಕೆ ನೀಡದೇ ಇರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಗೋ ಮಾಂಸ ತಿನ್ನುತ್ತೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗೋಕಳ್ಳರಿಗೆ ಬೆಂಬಲ ನೀಡಿದ್ದಾರೆ. ಇಂತಹ ನೀಚ ರಾಜಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಸಂಸದ ನಳಿನ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pages