ಪ್ರತಾಪ್‍'ಚಂದ್ರ ಶೆಟ್ರಿಗೆ ಸಿಗದ ಸಚಿವ ಸ್ಥಾನ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಪ್ರತಿಭಟನೆಯ ಎಚ್ಚರಿಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪ್ರತಾಪ್‍'ಚಂದ್ರ ಶೆಟ್ರಿಗೆ ಸಿಗದ ಸಚಿವ ಸ್ಥಾನ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಪ್ರತಿಭಟನೆಯ ಎಚ್ಚರಿಕೆ

Share This
BUNTS NEWS, ಮಂಗಳೂರು: ಇದೀಗ ರಚನೆಗೊಂಡ ಕರ್ನಾಟಕ ಮುಖ್ಯಮಂತ್ರಿ ಶ್ರೀ ಕುಮಾರ ಸ್ವಾಮಿಯವರ  ಮಂತ್ರಿ ಮಂಡಲದಲ್ಲಿ  ಕಾಂಗ್ರೆಸ್ ಪಕ್ಷದ ಹಿರಿಯರು 4 ದಶಕಗಳ ಅನುಭವ ಇರುವ, ಹಾಗೂ 4 ಬಾರಿ ಶಾಸಕರಾಗಿ, ಮೂರನೇ ಬಾರಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ಚಂದ್ರ ಶೆಟ್ಟಿ ಯವರಿಗೆ ಸಚಿವ ಸ್ಥಾನವನ್ನು ನಿರಾಕರಿಸಲಾಗಿದೆ.
ಆದರೆ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಏಕ ಮಾತ್ರ ಶಾಸಕ, ವಿಧಾನ ಪರಿಷತ್ ಸದಸ್ಯರಾದ  ಪ್ರತಾಪ್ಚಂದ್ರ ಶೆಟ್ಟಿ ಯವರನ್ನ ಬಾರಿ ಸಚಿವರನ್ನಾಗಿ ಆಯ್ಕೆ ಮಾಡಬೇಕಾಗಿತ್ತು.ಆದರೆ ಅವರಿಗೆ ಅವಕಾಶ ನಿರಾಕರಿಸಿದ್ದಕ್ಕೆ ಹಾಗೂ ಬಂಟ ಸಮಾಜದ ಅಭ್ಯರ್ಥಿತನವನ್ನು ನಿರಾಕರಿಸಿರುವುದು ಬಹಳ ನೋವನ್ನು ಉಂಟು ಮಾಡಿದೆ.

ಕಾಂಗ್ರೆಸ್ ಪಕ್ಷದ ಮುಖಂಡರು ಇನ್ನು ಮುಂದೆ ಪ್ರತಾಪ್ಚಂದ್ರ ಶೆಟ್ಟಿ ಯವರಿಗೆ ಮುಂದಿನ ಸಂಪುಟ ವಿಸ್ತರಣಾ ಸಂದರ್ಭದಲ್ಲಿ ಅವಕಾಶ ನೀಡಲು ಮೂಲಕ ಆಗ್ರಹಿಸಲಾಗಿದೆ. ನಿಲುವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಮೂಲಕ ಒತ್ತಾಯಿಸಿರುತ್ತಾರೆ.

ಒಂದು ವೇಳೆ ಸಂಪುಟ ವಿಸ್ತರಣಾ ಸಂದರ್ಭದಲ್ಲಿ ನಮ್ಮ ಸಮಾಜಕ್ಕೆ ಅವಕಾಶ ನೀಡದಿದ್ದಲ್ಲಿ ಒಕ್ಕೂಟದ ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು. ನಿಲುವನ್ನು ವಿಶೇಷವಾಗಿ ಗಣನೆಗೆ ತೆಗೆದುಕೊಳ್ಳಬೇಕಾಗಿದೆ.

Pages