ದುಬಾಯಿ ವಿಶ್ವ ತುಳು ಸಮ್ಮೇಳನ: ಡಾ. ವೀರೆಂದ್ರ ಹೆಗ್ಗಡೆ ಜತೆ ಸಮಾಲೋಚನೆ, ಆಹ್ವಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ದುಬಾಯಿ ವಿಶ್ವ ತುಳು ಸಮ್ಮೇಳನ: ಡಾ. ವೀರೆಂದ್ರ ಹೆಗ್ಗಡೆ ಜತೆ ಸಮಾಲೋಚನೆ, ಆಹ್ವಾನ

Share This
BUNTS NEWS NETWORK, ಮಂಗಳೂರು: ಅರಬ್ ಸಂಸ್ಥಾನದಲ್ಲಿ ನ.23, 24ರಂದು ದುಬಾಯಿಯ ಅಲ್ನಾಸರ್ ಲೀಸರ್ ಲ್ಯಾಂಡ್ಐಸ್ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ತುಳು ಸಮ್ಮೇಳನ ಜರಗಲಿದ್ದು, ಸಮ್ಮೇಳನದ ಕುರಿತು ಸಂಘಟನೆಯ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ದುಬಾಯಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕಾರ್ಯಕ್ರಮದ ರೂಪುರೇಶೆಗಳನ್ನು ವಿವರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದರು.
ಸಮ್ಮೇಳನ ತಯಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ವೀರೆಂದ್ರ ಹೆಗ್ಗಡೆ ಅವರು ಎರಡು ದಿನಗಳ ಕಾಲ ನಡೆಯುವ ವಿಶ್ವ ತುಳು ಸಮ್ಮೇಳನಕ್ಕೆ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು. ಕೊಲ್ಲಿ ರಾಷ್ಟ್ರದ ತುಳುವರು, ಅಖಿಲಭಾರತ ತುಳು ಒಕ್ಕೂಟ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸಾಗರೋತ್ತರ ತುಳುವರ ಸಹಯೋಗದೊಂದಿಗೆ ಆಯೋಜಿಸಲಾಗುವ ವಿಶ್ವ ತುಳು ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ವೀರೆಂದ್ರ ಹೆಗ್ಗಡೆ, ಗೌರವ ಅತಿಥಿಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಮತ್ತು ಮುಸ್ಲಿಂ ಪ್ರವಚನಕಾರರು ಮತ್ತು ಅತಿಥಿಗಳಾಗಿ ಕರ್ನಾಟಕದಿಂದ ಗಣ್ಯರು  ಭಾಗವಹಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷರಾಗಿ ಎನ್.ಎಂ.ಸಿ ಸಮೂಹ ಸಂಸ್ಥೆಯ ಸ್ಥಾಪಕರು ಮತ್ತು ಚೇರ್ಮ್ಯಾನ್ ಡಾ. ಬಿ.ಆರ್ ಶೆಟ್ಟಿ  ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ವಿಶ್ವ ತುಳು ಸಮ್ಮೇಳನದ ವಿಶೇಷ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳ್ಳಲಿದೆ.

ಡಾ, ವೀರೆಂದ್ರ ಹೆಗ್ಗಡೆ ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಸರ್ವೋತ್ತಮ ಶೆಟ್ಟಿ ಅವರ ನಿಯೋಗದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ .ಸಿ.ಭಂಡಾರಿ, ಅಖಿಲ ಭಾರತ ತುಳು ಒಕ್ಕೂಟದ ಪದಾಧಿಕಾರಿಗಳಾದ ಧರ್ಮಪಾಲ್ ದೇವಾಡಿಗ, ನಿಟ್ಟೆ ಶಶಿಧರ ಶೆಟ್ಟಿ, ಶ್ರೀಯಾನ್ ಮುಂಬಾಯಿ ಮೊದಲಾದವರು ಉಪಸ್ಥಿತರಿದ್ದರು.

Pages