ಮಂಗಳೂರು: ಕರ್ನಾಟಕ ತುಳು ಸಾಹಿತ್ಯ
ಅಕಾಡೆಮಿವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ
ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ
ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು
ತೀರ್ಮಾನಿಸಿರುವ ಪ್ರಕಾರ ಜುಲಾಯಿ 21 ರಂದು
ಶನಿವಾರ ಅಕಾಡೆಮಿ ಸಿರಿಚಾವಡಿಯಲ್ಲಿ ಸಾಹಿತಿಗಳಾದ
ಶ್ರೀ ಸದಾನಂದ ನಾರಾವಿ ಇವರನ್ನು
ಸನ್ಮಾನಿಸಲಾಗುವುದು.
ಚಾವಡಿ
ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ
ಅಕಾಡೆಮಿ ಅಧ್ಯಕ್ಷ ಶ್ರೀ ಎ.
ಸಿ. ಭಂಡಾರಿ ಅಧ್ಯಕ್ಷತೆ ವಹಿಸಲಿರುತ್ತಾರೆ,
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷರಾದ
ಧರ್ಮದರ್ಶಿ ಹರಿಕೃಷ್ಣ ಪುನರೂರು ಶ್ರೀ ಸದಾನಂದ
ನಾರವಿಯವರನ್ನು ಸನ್ಮಾನಿಸಲಿರುವರು, ಆಳ್ವಾಸ್ ಕಾಲೇಜಿನ ಸಹಪ್ರಾಧ್ಯಪಕರಾದ
ಶ್ರೀ ಯೋಗೀಶ್ ಕೈರೋಡಿ ಮುಖ್ಯ
ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು,
ಸಾಹಿತಿಗಳು ಹಾಗೂ ಸದಾನಂದ ನಾರಾವಿಯವರ
ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಅಧಿಕ
ಸಂಖ್ಯೆಯಲ್ಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ತುಳು ಸಾಹಿತ್ಯ
ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಇವರು
ವಿನಂತಿಸಿದ್ದಾರೆ.