ಸೆ.30 : ಸುರತ್ಕಲ್ ಬಂಟರ ಸಂಘದ ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸೆ.30 : ಸುರತ್ಕಲ್ ಬಂಟರ ಸಂಘದ ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ

Share This
BUNTS NEWS, ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 30ರಂದು ಭಾನುವಾರ ಸುರತ್ಕಲ್ ಬಂಟರ ಸಂಘದ ವ್ಯಾಪ್ತಿಯ ಗ್ರಾಮಗಳಿಗೆ ಸಮಾಜ ಬಾಂಧವರಿಗಾಗಿ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ.
15 ನಿಮಿಷ ಕಾಲ ಮಿತಿಯಲ್ಲಿ  ಗ್ರಾಮವಾರು ಸಾಂಸ್ಕøತಿಕ ಸ್ಪರ್ಧೆ ಜರಗಲಿದೆ. ಸ್ಪರ್ಧೆಯಲ್ಲಿ ಸಮಾಜಕ್ಕೆ ಸಂದೇಶ ಸಾರುವ ಪ್ರಹಸನ, ನೃತ್ಯ, ಹಾಡುಗಳು ಒಳಗೊಂಡಿರಬೇಕು. ಪ್ರಥಮ ಪ್ರಶಸ್ತಿಯೊಂದಿಗೆ 5 ಸಾವಿರ ರೂ. ನಗದು. ದ್ವಿತೀಯ ಪ್ರಶಸ್ತಿ 4 ಸಾವಿರ ರೂ. ನಗದು ಹಾಗೂ ತೃತೀಯ ಪ್ರಶಸ್ತಿ 3 ಸಾವಿರ ನಗದು ನೀಡಲಾಗುತ್ತದೆ. ಅಲ್ಲದೆ ಅತ್ಯುತ್ತಮ ಪ್ರಹಸನ, ಅತ್ಯುತ್ತಮ ನೃತ್ಯ ಹಾಗೂ ಅತ್ಯುತ್ತಮ ಹಾಡಿಗೆ ಬಹುಮಾನವಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವರ್ಷದ ವಯೋಮಿತಿ ಇಲ್ಲ. ಸ್ಪರ್ಧೆಯ ಹೆಚ್ಚಿನ ಮಾಹಿತಿಗಾಗಿ ಸಾಂಸ್ಕೃತಿಕ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ (9449389810) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Pages