ಶ್ರೀ ಕ್ಷೇತ್ರ ಕದ್ರಿಯಲ್ಲಿ ಸೆ.2ರಂದು ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶ್ರೀ ಕ್ಷೇತ್ರ ಕದ್ರಿಯಲ್ಲಿ ಸೆ.2ರಂದು ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ

Share This
ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವ ಪ್ರಯತ್ನವಾಗಿ ಹಾಗೂ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸುವ ಸದುದ್ದೇಶದಿಂದ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಕದ್ರಿ ದೇವಳದಲ್ಲಿ ಸೆ.2ರಂದು ಆಯೋಜಿಸಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ ಕಲ್ಕೂರ ಹೇಳಿದರು.
ಅವರು ಶಾರದಾ ವಿದ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭಾರಿ ಒಟ್ಟು 34 ವಿಭಾಗಗಳಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆಯು ಸೆ.2ರಂದು ಬೆಳಗ್ಗೆ 8ರಿಂದ ರಾತ್ರಿ 12ರವರೆಗೆ ನಡೆಯಲಿದೆ. ವಿವಿಧ ವಯೋಮಾನದವರಿಗೆ ತಕ್ಕಂತೆ ನಾನ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಭಾಗವಹಿಸಿದ ಪ್ರತಿ ಸ್ಪರ್ಧಿಗಳಿಗೂ ಉಡುಪಿ ಕಡೆಗೋಲು ಕೃಷ್ಣನ ಪಂಚಲೋಹದ ವಿಗ್ರಹ, ಶ್ರೀ ಕೃಷ್ಣ ಚರಿತ್ರೆ ಪುಸ್ತಕ, ಕದ್ರಿ ಶ್ರೀ ಮಂಜುನಾಥ ದೇವರ ಭಾವಚಿತ್ರ ಹಾಗೂ ಇನ್ನಿತರ ಉಡುಗೊರೆಗಳನ್ನು ನೀಡಲಾಗುವುದು. ಸರ್ವರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಕದ್ರಿ ನವನೀತ ಶೆಟ್ಟಿ, ದಯಾನಂದ ಕಟೀಲು, ಎಂ.ಬಿ. ಪುರಾಣಿಕ್, ರತ್ನಾಕರ ಜೈನ್, ವಿಜಯಲಕ್ಷ್ಮಿ ಬಿ. ಶೆಟ್ಟಿ, ಕೆ.ಎಸ್.ಕಲ್ಲೂರಾಯ, ಸುಧಾಕರ ರಾವ್ ಪೇಜಾವರ ಹಾಗೂ ಮ್ತತಿತರ ಪ್ರಮುಖರು ಉಪಸ್ಥಿತರಿದ್ದರು.

[ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆಯ ಮಾಹಿತಿ-ವಿವರಗಳು ಈ ಕೆಳಗಿನಂತಿವೆ]

Pages