BUNTS NEWS, ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ ಚಾವಡಿ ತಮ್ಮನ ಕಾರ್ಯಕ್ರಮದಲ್ಲಿ ಹಿರಿಯ ಸಿರಿ ಪಾಡ್ದನ ಕಲಾವಿದೆ ಲೀಲಾ ಶೆಡ್ತಿ ಅವರನ್ನು ಚಾವಡಿ ತಮ್ಮನ ನೀಡಿ ಗೌರವಿಸಲಾಯಿತು.
ಜಾನಪದ ಸಂಶೋಧಕ ಡಾ.ಎಸ್.ಆರ್. ಅರುಣ್ ಕುಮಾರ್ ಅವರು ಸಿರಿ ಆಚರಣೆ ಬಗ್ಗೆ ಉಪನ್ಯಾಸ ನೀಡಿದರು. ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಿಜಿಸ್ಟ್ರಾರ್ ಚಂದ್ರಹಾಸ ರೈ ಉಪಸ್ಥಿತರಿದ್ದರು.
ಅಕಾಡೆಮಿ ಸದಸ್ಯ ಡಾ.ವೈ.ಎನ್.ಶೆಟ್ಟಿ ಸ್ವಾಗತಿಸಿದರು. ಸದಸ್ಯ ತಾರಾನಾಥ್ ಗಟ್ಟಿ ಕಾಪಿಕಾಡ್ ವಂದಿಸಿದರು, ಸದಸ್ಯೆ ಸುಧಾ ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು.