ಭಾರತೀಯ ಸಂಸ್ಕೃತಿ-ಸಂಸ್ಕಾರ ಉಳಿಸಿ ಬೆಳೆಸುವ ಶಿಕ್ಷಣ ನೀಡುವುದು ಶಕ್ತಿ ಶಿಕ್ಷಣ ಸಂಸ್ಥೆಯ ಗುರಿ: ಕೆ.ಸಿ. ನಾಯ್ಕ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಭಾರತೀಯ ಸಂಸ್ಕೃತಿ-ಸಂಸ್ಕಾರ ಉಳಿಸಿ ಬೆಳೆಸುವ ಶಿಕ್ಷಣ ನೀಡುವುದು ಶಕ್ತಿ ಶಿಕ್ಷಣ ಸಂಸ್ಥೆಯ ಗುರಿ: ಕೆ.ಸಿ. ನಾಯ್ಕ್

Share This

ಶಕ್ತಿ ವಸತಿ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

ಮಂಗಳೂರು: ಶಕ್ತಿ ಶಿಕ್ಷಣ ಸಂಸ್ಥೆ ಅಂತರಾಷ್ಟ್ರೀಯ ಗುಣಮಟ್ಟದಾಗಿದ್ದು ಭಾರತೀಯ ಸಂಸ್ಕೃತಿ ಸಂಸ್ಕಾರ ಉಳಿಸಿ ಬೆಳೆಸುವ ಶಿಕ್ಷಣವನ್ನು ನೀಡುವ ಗುರಿ ಹೊಂದಿದ್ದು ಶ್ರೀ ಗೋಪಾಲಕೃಷ್ಣ ದೇವರ ಪ್ರೇರಣೆಯಂತೆ ಸ್ಥಾಪಿಸಲಾಗಿದೆ ಎಂದು ಶಕ್ತಿ ವಸತಿ ಶಾಲೆಯ ಸ್ಥಾಪಕ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೋಕ್ತೆಸರ ಕೆ.ಸಿ. ನಾಯ್ಕ್ ಹೇಳಿದರು.
ಅವರು ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಕಾಲೇಜು ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಇವರ ಸಹಯೋಗದಲ್ಲಿ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಎರ್ಪಡಿಸಲಾದ ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ವರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡುವ ಮೂಲಕ ಅವರಲ್ಲಿನ ಸಂತೋಷದಲ್ಲಿ ಶ್ರೀ ಕೃಷ್ಣನನ್ನು ಕಾಣಬಹುದಾಗಿದೆ. ಇಂತಹ ಅನೇಕ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಮಂಗಳೂರು ಮಾತ್ರವಲ್ಲದೆ ರಾಜ್ಯದೆಲ್ಲೆಡೆಯಿಂದ ಶಿಕ್ಷಣಕ್ಕಾಗಿ ಬರುವ ಮಕ್ಕಳಿಗೆ ಪೂರಕವಾಗಿ ವಸತಿ ಶಾಲೆಯನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಸಂಸ್ಥೆಯ ಸರ್ವತೋಮುಖ ಬೆಳವಣಿಗೆಯಲ್ಲಿ ಸರ್ವರ ಪ್ರೋತ್ಸಾಹದ ಜತೆಗೆ ಪ್ರತಿ ಕಾರ್ಯದಲ್ಲೂ ಶ್ರೀಕೃಷ್ಣನು ಶಕ್ತಿ ತುಂಬಲಿ ಎಂದರು.

ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕಿ ಪೂರ್ಣಿಮಾ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೂಡುಶೆಡ್ಡೆ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯ ಸುಬ್ರಾಯ ಪೈ, ಅಡಳಿತ ಮಂಡಳಿಯ ಸದಸ್ಯೆ ಸಗುಣ ಸಿ ನಾಯ್ಕ್, ಸಂಸ್ಥೆಯ ಪ್ರಮುಖ ಸಲಹೆಗಾರ ರಮೇಶ್ ಕೆ ಹಾಗೂ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ ಬಾನು ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ನೀಮ ಸಕ್ಸೇನ  ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಶ್ರೀ ಗೋಪಾಲಕೃಷ್ಣ  ದೇವಸ್ಥಾನದ ಆಡಳಿತಾಧಿಕಾರಿ ಕೃಷ್ಣ ಕುಮಾರ್ ಸ್ವಾಗತಿಸಿ,  ಶಕ್ತಿ ಎಜ್ಯುಕೇಶನ್ ಟ್ರಸ್ಟ್‍ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಅತಿಥಿಗಳನ್ನು ಪರಿಚಯಿಸಿದರು. ಶಕ್ತಿ ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ವಂದಿಸಿದರು. ಶಶಿಕಲಾ ನಿರೂಪಿಸಿದರು.

Pages