ಮಂಗಳೂರು ವಿವಿ ಉಪಕುಲಪತಿ ಡಾ| ಕಿಶೋರ್ ಕುಮಾರ್’ರಿಂದ ಶಕ್ತಿ ಶಿಕ್ಷಣ ಸಂಸ್ಥೆಯ ವೆಬ್‍ಸೈಟ್ ಅನಾವರಣ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಂಗಳೂರು ವಿವಿ ಉಪಕುಲಪತಿ ಡಾ| ಕಿಶೋರ್ ಕುಮಾರ್’ರಿಂದ ಶಕ್ತಿ ಶಿಕ್ಷಣ ಸಂಸ್ಥೆಯ ವೆಬ್‍ಸೈಟ್ ಅನಾವರಣ

Share This
ಮಂಗಳೂರು: ನಗರದ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪ.ಪೂ. ಕಾಲೇಜಿನ ವೆಬ್‍ಸೈಟ್ [www.shakthi.net.in] ಅನಾವರಣ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಉಪಕುಲಪತಿ ಡಾ| ಕಿಶೋರ್ ಕುಮಾರ್ ಅವರು ಗುರುವಾರ ಅನಾವರಣಗೊಳಿಸಿದರು.
ನಂತರ ಸಭೆಯನ್ನುದೇಶಿಸಿ ಮಾತನಾಡಿದ ಅವರು ಇಂದಿನ ಕಾಲಘಟದಲ್ಲಿ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಯ ವೆಬ್‍ಸೈಟ್ ಹೊಂದಿರುವ ಅಗತ್ಯತೆ ಇದೆ. ಇದರಿಂದ ಶಾಲೆ-ಕಾಲೇಜಿನಲ್ಲ ನಡೆಯುವ ಪ್ರತಿಯೊಂದು ವಿಚಾರ, ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ, ಹೆತ್ತವರಿಗೆ ತಿಳಿಯಬಲ್ಲುದು. ಶಿಕ್ಷಣ ಸಂಸ್ಥೆಯ ಸಂಪೂರ್ಣ ಮಾಹಿತಿ ಲಭ್ಯವಿರುವುದರಿಂದ ಹೆತ್ತವರು ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಸೇರಿಸಲು ಸಹಾಯಕವಾಗುತ್ತದೆ. ಶಿಕ್ಷಣ ಸಂಸ್ಥೆಗಳು ತಮ್ಮ ವೆಬ್‍ಸೈಟ್‍ನ್ನು ಸರಿಯಾದ ರೀತಿಯಲ್ಲಿ ರೂಪುಗೊಳಿಸಿ ತಮ್ಮ ಶಿಕ್ಷಣ ಸಂಸ್ಥೆಯ ಪರಿಪೂರ್ಣ ಮಾಹಿತಿಯನ್ನು ನೀಡಬೇಕೆಂದರು.

ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರು ದಕ್ಷಿಣದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ಮಾತನಾಡಿ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವು ಪೂರ್ವ ಕಾಲೇಜು ಮೌಲ್ಯಯುತವಾದ ಶಿಕ್ಷಣವನ್ನು ಸಮಾಜಕ್ಕೆ ಕೊಡುವುದರ ಮೂಲಕ ಸಾಮಾಜಿಕ ಬದಲಾವಣೆಯನ್ನು ತರಲಿ. ಈ ಮೂಲಕ ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ಶಿಕ್ಷಣವನ್ನು ನೀಡುವಂತಾಗಲಿ ಎಂದು ಹಾರೈಸಿದರು. ಮಂಗಳೂರು ಉತ್ತರದ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ಅವರು ತಮ್ಮ ಸಂದೇಶದಲ್ಲಿ ವೆಬ್‍ಸೈಟ್‍ನ ಮೂಲಕ ದೇಶ ವಿದೇಶದಲ್ಲಿ ಶಕ್ತಿ ಎಜುಕೇಶನ್ ಟ್ರಸ್ಟ್‍ನ ವತಿಯಿಂದ ನಡೆಯುವ ಶಾಲೆ ಹಾಗೂ ಕಾಲೇಜಿನ ಮಾಹಿತಿಗಳು ಲಭಿಸಲಿ ಎಂದು ತಿಳಿಸಿದರು.
ಮುಖ್ಯ ಅತಿಥಿ ದ.ಕ.ಜಿಲ್ಲಾ ಪ.ಪೂ.ಕಾಲೇಜು ಪ್ರಾಂಶುಪಾಲರ ಎಸೋಸಿಯೇಶನ್‍ನ ಅಧ್ಯಕ್ಷೆ ಎಲ್ವಿರಾ ಫಿಲೋಮಿನಾ ಮಾತನಾಡಿ ಶಿಕ್ಷಣ ಸಂಸ್ಥೆಗಳು ತಮ್ಮದೇ ಆದ ವೆಬ್‍ಸೈಟ್‍ನ್ನು ಹೊಂದುವುದರಿಂದ ಪೋಷಕರಿಗೆ ಶಾಲೆಯಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಮಕ್ಕಳ ಮೇಲೆ ನಿಗಾಯಿರಿಸಲು ಅನುಕೂಲವಾಗುತ್ತದೆ. ವಿಶ್ವದ ಪ್ರತಿಯೊಬ್ಬರು ಶಿಕ್ಷಣ ಸಂಸ್ಥೆಯ ಸಮಗ್ರ ಮಾಹಿತಿಯನ್ನು ಪಡೆಯಲು ಸಹಾಯಕವಾಗುತ್ತದೆ. ಈ ನಿಟ್ಟಿನಲ್ಲಿ ಶಕ್ತಿ ಶಿಕ್ಷಣ ಸಂಸ್ಥೆ ಉತ್ತಮ ಕಾರ್ಯ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ.ನಾಯಕ್ ಸಮಾಜದ ಎಲ್ಲರೂ ಶಕ್ತಿ ಶಾಲೆ ಮತ್ತು ಕಾಲೇಜಿನ ಉಪಯೋಗವನ್ನು ಪಡೆಯಲಿ ಎಂದು ಶುಭ ಸಂದೇಶವನ್ನು ತಿಳಿಸಿದರು. ಶಕ್ತಿ ಶಿಕ್ಷಣ ಸಂಸ್ಥೆಯ ಆಡಳಿತ ಸದಸ್ಯೆ ಸಗುಣ ಸಿ. ನಾಯಕ್ ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಿದರು. ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮಾ ಬಾನು ಶಕ್ತಿ ಶಿಕ್ಷಣ ಸಂಸ್ಥೆಯ ವೆಬ್‍ಸೈಟ್ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಮುರಳೀಧರ್ ನಾಯ್ಕ್, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಪ್ಲಾಮಾ ಡೆವಲಪರ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ಎಂ.ಎ.ರಝಾಕ್, ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಕಿಶೋರ್ ಕುಮಾರ್ ರೈ ಶೇಣಿ, ಕಿಟ್ಟಲ್ ಕಾಲೇಜಿನ ಪ್ರಾಂಶುಪಾಲರಾದ ವಿಠಲ್, ಗ್ಲೋಬಲ್ ಟ್ರಾವೆಲ್ಸ್‍ನ ವ್ಯವಸ್ಥಾಪಕ ನಿರ್ದೇಶಕ ವಿಲಿಯಂ ಡಿಸೋಜ, ರೋಹನ್ ಕಾರ್ಪೊರೇಶನ್‍ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ, ಅಕ್ಷರೋದ್ಯಮ ಸಂಸ್ಥೆಯ ಸಿ.ಇ.ಒ. ಸುನೀಲ್ ಕುಲಕರ್ಣಿ, ಶ್ರೀ ರಾಮುಲು ನಾಯ್ಡು, ಖ್ಯಾತ ಲೆಕ್ಕ ಪರಿಶೋಧಕರು, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಮಧುಲಿಕಾ ರಾವ್, ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ, ಶಕ್ತಿ ಎಜುಕೇಶನ್ ಟ್ರಸ್ಟ್‍ನ ಪ್ರಧಾನ ಸಲಹೆಗಾರ ರಮೇಶ್ ಕೆ. ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಶಕ್ತಿ ಎಜುಕೇಶನ್ ಟ್ರಸ್ಟ್‍ನ ಆಡಳಿತಾಧಿಕಾರಿ ಬೈಕಾಡಿ ಜನಾರ್ಧನ ಆಚಾರ್ ಸ್ವಾಗತಿಸಿ, ಶಕ್ತಿ ಪ.ಪೂ.ನ ಪ್ರಾಂಶುಪಾಲರಾದ ಪ್ರಭಾಕರ ಜಿ.ಎಸ್. ವಂದಿಸಿದರು.

Pages