ಮಾನವೀಯ ಮೌಲ್ಯಗಳನ್ನು ಮೈಗೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು: ರಾಜಗೋಪಾಲ ರೈ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಾನವೀಯ ಮೌಲ್ಯಗಳನ್ನು ಮೈಗೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು: ರಾಜಗೋಪಾಲ ರೈ

Share This
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯ ಶಿಕ್ಷಕರಿಗಾಗಿತರಗತಿಯಲ್ಲಿ ಸಂವಹನ’ ಹಾಗೂಮಾನವ ಸಂಪನ್ಮೂಲ ತರಬೇತಿ’ ಕಾರ್ಯಗಾರವು ಶನಿವಾರದಂದು ಸಮಾರೋಪಗೊಂಡಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಉದ್ಯಮಿ ರಾಜಗೋಪಾಲ ರೈ ಮಾತನಾಡಿ, ಅಧ್ಯಾಪಕರು ಈಗಿನ ಕಾಲಘಟ್ಟದಲ್ಲಿ ಸೃಜನಾತ್ಮಕ ಹಾಗೂ ಸಕ್ರೀಯರಾಗಿರಬೇಕು. ವಿದ್ಯಾರ್ಥಿಗಳಿಗೆ ತಾಯಿಯ ರೂಪದಲ್ಲಿ ಕಲಿಸಬೇಕು. ನಮ್ಮಲ್ಲಿ ಒಳ್ಳೆಯ ಅಧ್ಯಯನ ಹಾಗೂ ಚಿಂತನೆ ಇರಬೇಕು. ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಕಲಿಸುವ ಗುಣವನ್ನು ಪ್ರತಿಯೊಬ್ಬ ಅಧ್ಯಾಪಕರು ರೂಢಿಸಬೇಕು. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸುವಲ್ಲಿ ಅಧ್ಯಾಪಕರ ಪಾತ್ರ ಮಹತ್ತರವಾದದ್ದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಶಕ್ತಿ ಪೂ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ.ಜಿ.ಎಸ್ ಮಾತನಾಡಿ ಶಾಲೆಯಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಒಂದು ಕುಟುಂಬ ಇದ್ದಂತೆ. ಪೋಷಕರು ಶಾಲೆಯ ಮೇಲೆ ವಿಶ್ವಾಸವನ್ನು ಇರಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಿರುತ್ತಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಒಬ್ಬ ಶಿಕ್ಷಕನ ಹೊಣೆಯಾಗಿರುತ್ತದೆ. ಪ್ರಸ್ತುತ ಕಂಪ್ಯೂಟರ್ ಯುಗದಲ್ಲಿ ಅಧ್ಯಾಪಕರ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮವು ಮಹತ್ವವೆನಿಸುತ್ತದೆ. ಶಕ್ತಿ ವಸತಿ ಶಾಲೆಯ ಅಧ್ಯಾಪಕರು ಕಾರ್ಯಗಾರದ ಸಂಪೂರ್ಣ ಲಾಭವನ್ನು ಪಡೆದು ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಬೇಕೆಂದು ಕರೆ ನೀಡಿದರು.

ಕಾರ್ಯಗಾರದ ಕುರಿತಂತೆ ಅಧ್ಯಾಪಕರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾೈಕ್, ಶಕ್ತಿ ಎಜ್ಯುಕೇಶನ್ ಟ್ರಸ್ಟ್ ಟ್ರಸ್ಟಿಯಾದ ಡಾ. ಮುರಳೀಧರ್ ನಾೈಕ್, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ.ಕೆ, ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಂ ಬಾನು ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಶಿಕಲಾ ಎಂ.ಎನ್ ನೆರೆವೇರಿಸಿದರು.

Pages