ಮಂಗಳೂರು: ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು
ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ
ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ
ಗುರು ಎಂದು ಕ್ಯಾ. ಗಣೇಶ್ ಕಾರ್ಣಿಕ್ ಹೇಳಿದರು.
ಅವರು ಶಿಕ್ಷಕರ ದಿನದಂದು
ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನುದ್ದೇಶಿಸಿ
ಮಾತನಾಡುತ್ತಿದ್ದರು. ಇನ್ನೋರ್ವ ಅತಿಥಿ ಮಾಜಿ ಶಾಸಕ ಜೆ.ಆರ್ ಲೋಬೊ ಮಾತನಾಡುತ್ತಾ ಶಿಕ್ಷಕರು ತಮ್ಮ
ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದಲೇ ತಮ್ಮ ಶಿಷ್ಯರ
ಮನಃ ಪಟಲದಲ್ಲಿ ಸದಾ ನಿಲ್ಲುತ್ತಾರೆ, ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ನಿರ್ಮಾಣ ಉತ್ತಮ ಶಿಕ್ಷಕರಿಂದಲೇ
ಸಾಧ್ಯವಾಯಿತು ಎಂದು ಅವರು ತನ್ನ ಅನಿಸಿಕೆ ವ್ಯಕ್ತ ಪಡಿಸಿದರು. ಜಿಲ್ಲಾ ಪದವಿ ಪೂರ್ವ ವಿದ್ಯಾಂಗ ಉಪನಿರ್ದೇಶಕ
ಶ್ರೀ ನಾಗರಾಜಪ್ಪ ಮುಖ್ಯ ಅತಿಥಿಯಾಗಿ ಬಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ
ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಸೇವೆ ಸಲ್ಲಿಸಿ ತಮ್ಮ ಇಳಿ ಪ್ರಾಯದಲ್ಲೂ ವಿವಧ ಕ್ಷೇತ್ರಗಳಲ್ಲಿ ನಿಸ್ಪøಹ
ಸೇವೆ ಸಲ್ಲಿಸುತ್ತಿರುವ ನಿವೃತ್ತ ಶಿಕ್ಷಕರಾಗಿರುವ ಬಿ. ಶ್ರೀನಿವಾಸ ರಾವ್, ಸಾವಿತ್ರಿ ಶ್ರೀನಿವಾಸ
ರಾವ್, ಕೆ.ಎ ರೋಹಿಣಿ, ಬೈಲೂರು ನಾರಾಯಣ ತಂತ್ರಿ, ಬಿ. ಶಂಭು ಶೆಟ್ಟಿ ಹಾಗೂ ಬಿ.ನಾರಾಯಣ ನಾಯಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯ
ಪ್ರಭಾಕರ ಜಿ.ಎಸ್. ಅತಿಥಿಗಳನ್ನು ಸ್ವಾಗತಿಸಿದರು. ಡಾ. ಮುರಳೀಧರ ನಾೈಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಅಭಿನಂದನ ಭಾಷಣ ಮಾಡಿದರು.
ಶ್ರೀ ಗೋಪಾಲಕೃಷ್ಣ
ದೇವಸ್ಥಾನ ಆಡಳಿತ ಮೊಕ್ತೇಸರ ಕೆ.ಸಿ ನಾೈಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಕ್ತಿ ಎಜ್ಯುಕೇಶನ್
ಟ್ರಸ್ಟ್ ನ ಕಾರ್ಯದರ್ಶಿ ಸಂಜಿತ್ ನಾೈಕ್ , ಶಕ್ತಿ ವಸತಿ ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಮಧುಲಿಕಾ
ರಾವ್, ಶಿಕ್ಷಕಿ ಶ್ರೀಮತಿ ಪ್ರಿಯಾಂಕ, ವಿದ್ಯಾರ್ಥಿಯಾದ ಅನಿಲ್ ಶಿಕ್ಷಕರ ದಿನದ ಮಹತ್ವದ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳಾದ ಪ್ರತೀಕ್ ಮತ್ತು ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಅಭಿವೃದ್ಧಿ ಅಧಿಕಾರಿ
ನಸೀಮ್ ಬಾನು, ಪ್ರಧಾನ ಸಲಹೆಗಾರ ರಮೇಶ್ ಕೆ. ಆಡಳಿತ ಸಮಿತಿಯ ಸಗುಣ ಸಿ ನಾೈಕ್ ಹಾಗೂ ಅಂಜು ಆಳ್ವ ವೇದಿಕೆಯಲ್ಲಿ
ಉಪಸ್ಥಿತರಿದ್ದರು. ವಿದ್ಯಾರ್ಥಿಯಾದ ತುಷಾರ್ ವಂದಿಸಿದರು.