ಕೊಂಡೆವೂರುನಲ್ಲಿ ವಿಶ್ವಜಿತ್ ಅತಿರಾತ್ರ ಸೋಮಯಾಗ : ಮುಂಬಯಿ ಸಭೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕೊಂಡೆವೂರುನಲ್ಲಿ ವಿಶ್ವಜಿತ್ ಅತಿರಾತ್ರ ಸೋಮಯಾಗ : ಮುಂಬಯಿ ಸಭೆ

Share This
ಮುಂಬಯಿ: ಸಮಾಜ ಕಲ್ಯಾಣದ ಸಂಕಲ್ಪ ಹೊಂದಿದ ಸಾಧುಸಂತರು ಧರ್ಮಭೂಮಿಯ ಕರ್ಮ ತೀರಿಸಲು ತಮ್ಮಲ್ಲಿನ ಅಧ್ಯಾತ್ಮಿಕ ಮನಸ್ಸುಗಳನ್ನು  ಶುದ್ಧೀಕರಿಸಿ ಜನ್ಮಕಲ್ಯಾಣ ಮಾಡಬೇಕೆನ್ನುವ ಉದ್ದೇಶವಿರಿಸಿದ್ದೇ ವೆ. ಸಂತರು ಭಾವೈಕ್ಯದ ಹರಿಕಾರರು ಆಗಿದ್ದು ಅವರ ಅನುಗ್ರಹದಿಂದ ಅಧ್ಯಾತ್ಮದ ಒಲವನ್ನು ಹೊಂದಿದಾಗಲೇ ವೈಚಾರಿಕ ಪ್ರಜ್ಞೆಯ ಜಾಗೃತಿ ಮೂಡುವುದು. ಯಾಗದಿಂದ ಭಕ್ತರಲ್ಲಿ ಆತ್ಮಜ್ಞಾನ ವೃದ್ಧಿಯಾಗುವುದು ಎಂದು ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ತಿಳಿಸಿದರು.
ಉಪನಗರ ಮುಲುಂಡ್ ಶಿವಾಜಿ ನಗರದಲ್ಲಿನ ನವೋದಯ ಕನ್ನಡ ವಿದ್ಯಾಲಯದ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ವಿಶ್ವಜಿತ್ ಅತಿರಾತ್ರ ಸೋಮಯಾಗದ ಪೂರ್ವಸಿದ್ಧತಾ ಮುಂಬಯಿ ಸಭೆ ಉದ್ಘಾಟಿಸಿ ಶ್ರೀ ಮೋಹನದಾಸ ಸ್ವಾಮೀಜಿ ನೆರೆದ ಸದ್ಭಕ್ತರನ್ನು ಅನುಗ್ರಹಿಸಿದರು. ನನ್ನ ಶಿಷ್ಯರಾಗಿದ್ದ ಕೊಂಡೆಯೂರು ಶ್ರೀಗಳಿಗೆ ದೀಕ್ಷೆಯನ್ನಿತ್ತಾಗಲೇ ಅವರಲ್ಲಿ ಭಕ್ತಿಮಾರ್ಗದಿಂದ ಸಮಜೋದ್ಧಾರ ನಡೆಸುವ ಶಕ್ತಿ ಕಂಡಿದ್ದೆ. ಆದುದರಿಂದ ಅವರ ಆಶಯದ ಯಾಗದ ಮಹತ್ವವನ್ನು ನಾವೆಲ್ಲರೂ ತಿಳಿದು ಅವರೊಡನೆ ಒಗ್ಗೂಡಿ ಸಮಾಜ ಕಲ್ಯಾಣದ ಸಂಕಲ್ಪವನ್ನು ಈಡೇರಿಸ ಬೇಕು. ಆ ಮೂಲಕ ಭಾರತೀಯ ಸಂಸ್ಕೃತಿ ವಿಶ್ವದಾದ್ಯಂತ ಬೆಳಗಿಸೋಣ ಎಂದರು.

2019ರ ಫೆ.18ರಿಂದ 24ರ ತನಕ ಕಾಸರಗೋಡು ಉಪ್ಪಳ ಅಲ್ಲಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ದಲ್ಲಿ ಹಮ್ಮಿಕೊಳ್ಳಲಾಗಿರುವ `ವಿಶ್ವಜಿತ್ ಅತಿರಾತ್ರ ಸೋಮಯಾಗ'ದ ಬಗ್ಗೆ ಕೊಂಡೆವೂರು ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಸಂಕ್ಷೀಪ್ತ ಮಾಹಿತಿ ನೀಡುತ್ತಾ ಭಕ್ತಿಯಿಂದ ಬಂದ ಪ್ರತಿಯೊಬ್ಬ ಭಕ್ತರ ಮನೋಭಿಷ್ಠಗಳನ್ನು ಈಡೇರಿಸುವುದು ಸನ್ಯಾಸಿಗಳ ಧರ್ಮವಾಗಿದೆ. ಸಜ್ಜನರ ಸ್ನೇಹಿಗಳಾಗಿ ಜೀವನ್ನುದ್ದಕ್ಕೂ ಭಕ್ತೋದ್ಧಾರದ ಕಾರ್ಯ ನೆರವೇರಿಸಿ ಜೀವನ ಪಾವನಗೊಳಿಸಲು ಇಂತಹ ಧಾರ್ಮಿಕ ಸೇವೆಗಳು ಅಗತ್ಯವಾಗಿವೆ. ಆದ್ದರಿಂದ ಸೋಮಯಾಗದಲ್ಲಿ ಭಾಗಿಗಳಾಗಿ ಪುಣ್ಯಕ್ಕೆ ಪಾತ್ರರಾಗಿರಿ ಎಂದು ಭಕ್ತಾಭಿಮಾನಿ ಬಂಧುಭಗಿನಿಯರಿಗೆ ಕರೆಯಿತ್ತರು.

ವೇದಿಕೆಯಲ್ಲಿ ನವೋದಯ ಕನ್ನಡ ಸೇವಾ ಸಂಘದ ಅಧ್ಯಕ್ಷ ಹಾಗೂ ಶಾಲಾಡಳಿತ ಸಮಿತಿ ಕಾರ್ಯಾಧ್ಯಕ್ಷ ಜಯ ಕೆ. ಶೆಟ್ಟಿ, ಶ್ರೀ ನಿತ್ಯಾನಂದ ಸೇವಾ ಸಮಿತಿ ಗಣೇಶ್‍ಪುರಿ ಟ್ರಸ್ಟೀ ನ್ಯಾಯವಾದಿ ಸಂಧ್ಯಾ ಜಾಧವ್, ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮುಂಬಯಿ ಸಮಿತಿ ಮಾಜಿ ಅಧ್ಯಕ್ಷರಾದ ಧರ್ಮಪಾಲ ಯು.ದೇವಾಡಿಗ, ಕೃಷ್ಣ ಎನ್.ಉಚ್ಚಿಲ್, ಮಾಜಿ ಗೌರವಾಧ್ಯಕ್ಷ ರೋಹಿದಾಸ್ ಆರ್.ಬಂಗೇರಾ, ಕರ್ನಾಟಕ ಸರಕಾರದ ಮಾಜಿ ಎಂಎಲ್‍ಸಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಸಮಿತಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಮೋನಪ್ಪ ಎಂ.ಭಂಡಾರಿ, ಯಶೋಧಾ ಭಟ್ಟಂಪಾಡಿ, ಸಂದೀಪ್ ಶೆಟ್ಟಿ, ಸದಾನಂದ ನಾವರ, ಜಯರಾಮ್ ಪೂಜಾರಿ ಮತ್ತಿತರ ಪದಾಧಿಕಾ ರಿಗಳು ವೇದಿಕೆಯಲ್ಲಿ ಆಸೀನರಾಗಿದ್ದರು.

ಮುಂಬಯಿ ಸಮಿತಿಯ ಅಶೋಕ್ ಎಂ.ಕೋಟ್ಯಾನ್ ಥಾಣೆ, ಎಸ್.ಕೆ ಶ್ರೀಯಾನ್, ವಿಶ್ವನಾಥ್ ಯು.ಮಾಡಾ, ರವಿ ಎಸ್.ಮಂಜೇಶ್ವರ, ಹರೀಶ್ ಕೆ.ಚೇವಾರ್, ಚಂದ್ರಶೇಖರ ಆರ್.ಬೆಲ್ಚಡ, ತೋನ್ಸೆ ಸಂಜೀವ ಪೂಜಾರಿ ಸೇರಿದಂತೆ ನೂರಾರು ಭಕ್ತರು, ಸಮಿತಿ ಸದಸ್ಯರು ಉಪಸ್ಥಿತರಿದ್ದು, ಶ್ರೀಗಳು ಫಲಮಂತ್ರಾಕ್ಷತೆಯೊಂದಿಗೆ ಹರಸಿದರು.

ಯಾಗ ಸಮಿತಿ ಗೌ| ಪ್ರ| ಕಾರ್ಯದರ್ಶಿ ನಿತ್ಯಾನಂದ ಡಿ.ಕೋಟ್ಯಾನ್ ಸ್ವಾಗತಿಸಿ ಕೊಂಡೆವೂರು ಕ್ಷೇತ್ರದ ಸೇವಾ ವೈಖರಿಯನ್ನು ಪ್ರಸ್ತಾಪಿಸಿ ವಿಶ್ವಜಿತ್ ಅತಿರಾತ್ರ ಸೋಮಯಾಗದ ಸಿದ್ಧತೆ ಬಗ್ಗೆ ತಿಳಿಸಿದರು. ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸಿದರು. ಮುಂಬಯಿ ಸಮಿತಿ ಅಧ್ಯಕ್ಷ ರಾಜೇಶ್ ರೈ ವಂದಿಸಿದರು. (ಚಿತ್ರ -ವರದಿ: ರೋನ್ಸ್ ಬಂಟ್ವಾಳ್)

Pages