BUNTS NEWS, ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಂಜುಷಾ ವಸ್ತು ಸಂಗ್ರಹಾಲಯವನ್ನು ಅ.24ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಾರ್ಪಣೆ ಮಾಡಲಿರುವರು.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಪಟ್ಟಾಧಿಕಾರಿಯಾಗಿ 50 ವರ್ಷಗಳನ್ನು ಪೂರೈಸಿರುವ ಪೂಜ್ಯ ಡಾ।। ವೀರೇಂದ್ರ ಹೆಗ್ಗಡೆ ಅವರನ್ನು ಸಿಎಂ ಕುಮಾರಸ್ವಾಮಿ ಅಭಿನಂದಿಸಲಿರುವರು. ಕಾರ್ಯಕ್ರಮದಲ್ಲಿ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ ಅವರು “ಸುವರ್ಣ ಸಂಚಯ” ಪುಸ್ತಕ ಮಾಲಿಕೆಯನ್ನು ಬಿಡುಗಡೆ ಮಾಡಲಿರುವರು.
ಸಮಾರಂಭವು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 3 ಗಂಟೆಗೆ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಉಸ್ತುವಾರಿ ಸಚಿವ ಯು.ಟಿ.ಖಾದರ್, ಶಾಸಕ ಹರೀಶ್ ಪೂಂಜ, ಎಂಎಲ್’ಸಿ ಗಳಾದ ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ ಮತ್ತಿತರ ಪ್ರಮುಖರು ಭಾಗವಹಿಸುತ್ತಿದ್ದಾರೆ.