BUNTS NEWS, ಮಂಗಳೂರು: ಜಾಗತಿಕ ಬಂಟರ ಸಂಘಗಳ
ಒಕ್ಕೂಟವು 21 ಮಂದಿ ಫಲಾನುಭವಿಗಳಿಗೆ ಸಹಾಯಧನ
ನೀಡಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಚೇರಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಿದ್ಯಾಭ್ಯಾಸ, ಚಿಕಿತ್ಸೆ, ಮದುವೆ ಹಾಗೂ ಆಶ್ರಯ ವೆಚ್ಚಕ್ಕಾಗಿ 21 ಮಂದಿಗೆ ಸಹಾಯಧನದ ಚೆಕ್ ವಿತರಿಸಿದರು.
ಈ ಸಂದರ್ಭ ಒಕ್ಕೂಟದ ಕಾರ್ಯದರ್ಶಿ ವಿಜಯಪ್ರಸಾದ್ ಆಳ್ವ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಲ್ಕೆಬೈಲ್, ಸಿಬ್ಬಂದಿವರ್ಗ, ಫಲಾನುಭವಿಗಳ ಪೋಷಕರು ಹಾಗೂ ಸಂಬಂಧಿಕರು ಉಪಸ್ಥಿತರಿದ್ದರು.
ಈ ಸಂದರ್ಭ ಒಕ್ಕೂಟದ ಕಾರ್ಯದರ್ಶಿ ವಿಜಯಪ್ರಸಾದ್ ಆಳ್ವ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಲ್ಕೆಬೈಲ್, ಸಿಬ್ಬಂದಿವರ್ಗ, ಫಲಾನುಭವಿಗಳ ಪೋಷಕರು ಹಾಗೂ ಸಂಬಂಧಿಕರು ಉಪಸ್ಥಿತರಿದ್ದರು.