ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅಧ್ಯಕ್ಷರಾಗಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅಧ್ಯಕ್ಷರಾಗಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Share This
BUNTS NEWS, ಮುಂಬಯಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ನಡೆದ 17ನೇ ಮಹಾಸಭೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ತೋನ್ಸೆ ಜಯಕೃಷ್ಣ . ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ.
ಕಳೆದ 17 ವರ್ಷಗಳಿಂದ ನಾಡಿನ ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮಾತ್ರವಲ್ಲದೆ ನೆರೆಯ ಕಾಸರಗೋಡು ಜಿಲ್ಲೆಯ ಹಾಗೂ  ಪರಿಸರದ ಸಮಸ್ಯೆಗಳಿಗೆ ಸ್ಪಂದಿಸಿ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಕಾರ್ಯನಿರತರಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 17 ನೆಯ ವಾರ್ಷಿಕ ಮಹಾಸಭೆಯು  ಅ. 5ರಂದು ಕುರ್ಲಾ ಬಂಟರ ಸಂಘದ ಸಭಾಂಗಣದಲ್ಲಿ ಇಲ್ಲಿ ಜರಗಿತು.

ಸಂಘಟನೆ ಯು ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಯು ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ . ಶೆಟ್ಟಿಯವರ ನೇತೃತ್ವದಲ್ಲಿ ಮುಂಬಯಿ ಮಾತ್ರವಲ್ಲದೆ ಉಭಯ ಜಿಲ್ಲೆಗಳಲ್ಲಿಯೂ ಕ್ರೀಯಾಶೀಲವಾಗಿದ್ದು ಈಗಾಗಲೇ ಜಿಲ್ಲೆಗಳ ಹಲವಾರು ಸಮಸ್ಯೆಗಳನ್ನು ಬಗೆಹರಿಸುದರಲ್ಲಿ ಯಶಸ್ವಿಯಾಗಿದೆ.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಬೆಳ್ಚಡ ಅವರು ವಾರ್ಷಿಕ ವರದಿಯನ್ನು ಓದಿದರು. ಗೌ. ಕೋಶಾಧಿಕಾರಿ ತುಳಸಿದಾಸ್ ಅಮೀನ್ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಉಪಾಧ್ಯಕ್ಷರುಗಳಾದ ಸಿ. . . ಆರ್ ಶೆಟ್ಟಿ, ಮೊಯಿದ್ದೀನ್ ಮುಂಡ್ಕೂರು, ಜಗನ್ನಾಥ ಗಾಣಿಗ, ಪಿ. ಡಿ. ಶೆಟ್ಟಿ, ಜಗದೀಶ್ ಅತಿಕಾರಿ ಪೆಲೆಕ್ಸ್ ಡಿ.ಸೋಜ ರಾಮಚಂದ್ರ ಬೈಂಕಂಪಾಡಿ, ಸುರೇಂದ್ರ ಮೆಂಡನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಿತಿಯ ನೂತನ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯಡ್ಕ ಮೋಹನ್ ದಾಸ್, ಗೌ. ಕೋಶಾಧಿಕಾರಿಯಾಗಿ ಸುರೇಂದ್ರಕುಮಾರ್ ಮುಂಡ್ಕೂರು   ಆಯ್ಕೆಯಾಗಿರುವರು. ವಿವಿಧ ಜಾತೀಯ ಸಂಘಟನೆಗಳ ಪ್ರಮುಖರನ್ನು ಸನ್ಮಾನಿಸಲಾಯಿತುವಾರ್ಷಿಕ ಮಹಾಸಭೆಯ ಬಳಿಕ ಬಹಿರಂಗ ಅಧಿವೇಶನ ನಡೆದಿದ್ದು  ಹಿರಿಯ ಕನ್ನಡಿಗೆ ಎಂ. ಡಿ. ಶೆಟ್ಟಿ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಹಿರಿಯ ಹೋಟೇಲು ಉಧ್ಯಮಿ ರಘುರಾಮ ಶೆಟ್ಟಿ, ವಿರಾರ್ ಶಂಕರ ಶೆಟ್ಟಿ, ನ್ಯಾ. ಸುಭಾಶ್ ಶೆಟ್ಟಿ, ಐಕಳ ಗುಣಪಾಲ್ ಶೆಟ್ಟಿ, ಬೋಳ ಪ್ರಭಾಕರ ಶೆಟ್ಟಿ, ಉಳ್ತೂರು ಮೋಹನ್ ದಾಸ್ ಶೆಟ್ಟಿ ಹಾಗೂ ನಗರದ ಅನೇಕ ಗಣ್ಯರು ಬಾಗವಹಿಸಿದ್ದರು. ವರದಿ: ಈಶ್ವರ ಎಂ. ಐಲ್, ಚಿತ್ರ: ದಿನೇಶ್ ಕುಲಾಲ್

Pages