ನವರಾತ್ರಿ ಮಹೋತ್ಸವದ ಪ್ರಯುಕ್ತ ಕಟೀಲು ದೇವಳದ ವಾಹನ ಸಂಚಾರದಲ್ಲಿ ಮಾರ್ಪಾಡು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನವರಾತ್ರಿ ಮಹೋತ್ಸವದ ಪ್ರಯುಕ್ತ ಕಟೀಲು ದೇವಳದ ವಾಹನ ಸಂಚಾರದಲ್ಲಿ ಮಾರ್ಪಾಡು

Share This
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಅ. 1ರಿಂದ ಅ.18ರ ವರೆಗೆ ದೇವಸ್ಥಾನದಲ್ಲಿ ಲಲಿತ ಪಂಚಮಿಯ ಪೂಜಾ ಕಾರ್ಯಕ್ರಮ, ವಾಹನ ಪೂಜೆ ಮತ್ತು ಆಯುಧ ಪೂಜೆ ಇತ್ಯಾದಿ ಮಹೋತ್ಸವ ನಡೆಯಲಿರುವುದರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ  ಮೋಟಾರು ವಾಹನ ಕಾಯ್ದೆ 1988 ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989 ನಿಯಮ 221 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ಆದೇಶಿಸಿದ್ದಾರೆ
ಮಂಗಳೂರು ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದುಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ವಿಜಯ ಬ್ಯಾಂಕ್ ಎದುರುಗಡೆ ರಸ್ತೆಯಲ್ಲಿ ಚಲಿಸಿ, ಬಜಪೆ-ಮಂಗಳೂರು ಕಡೆಗೆ ಹೋಗುವುದು. ಕಾರು ಹಾಗೂ ಇತರ ವಾಹನಗಳಿಗೆ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ಸುಗಳು ಎಂದಿನಂತೆ ಬಸ್ಸು ನಿಲ್ದಾಣಕ್ಕೆ ಬಂದು ಹೋಗುವುದು. ದೇವಸ್ಥಾನದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಿಂದ ವಿಜಯಬ್ಯಾಂಕ್ ವರೆಗಿನ ಇಕ್ಕೆಲಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಿದೆ.

ನಿರ್ಬಂಧನೆಗಳು, ಪೊಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Pages