ಯೋಜನೆಗಳ ಅನುಷ್ಠಾನದಿಂದಾದ ಅಭಿವೃದ್ಧಿಯ ಚಿತ್ರಣ ನೀಡಿ : ಪೊನ್ನುರಾಜ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಯೋಜನೆಗಳ ಅನುಷ್ಠಾನದಿಂದಾದ ಅಭಿವೃದ್ಧಿಯ ಚಿತ್ರಣ ನೀಡಿ : ಪೊನ್ನುರಾಜ್

Share This
ಮಂಗಳೂರು: ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ವೇಳೆ ಕೇವಲ ಅಂಕಿ ಅಂಶಗಳ ಮೂಲಕ ಗುರಿ -ಸಾಧನೆ ಮಾಹಿತಿಗಿಂತ ಮುಖ್ಯವಾಗಿ ಯೋಜನೆಗಳಿಂದ ಜನರಿಗಾದ ಲಾಭಗಳ ಸಮಗ್ರ ಮಾಹಿತಿ ನೀಡಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಹೇಳಿದರು.
ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಥಮವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಸಮಗ್ರ ಪ್ರಗತಿ ಪರಿಶೀಲನೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗ ಕೈಗೆತ್ತಿಕೊಂಡಿರುವ ನಮ್ಮ ಗ್ರಾಮ ನಮ್ಮ ರಸ್ತೆ, ಬಹುಗ್ರಾಮ ಕುಡಿಯುವ ನೀರಿನಂತಹ ಯೋಜನೆಗಳಿಂದ ಜನರಿಗಾದ ಅನುಕೂಲತೆಯ ಬಗ್ಗೆ ವಿಭಾಗಕ್ಕೆ ಮಾಹಿತಿ ಇರಬೇಕು. ಯೋಜನೆಗಳು ನಿರರ್ಥಕವಾಗದಂತೆ, ಭವಿಷ್ಯದಲ್ಲಿ ನಿಷ್ಫಲವಾಗದಂತೆ ರೂಪಿಸಿ ಅನುಷ್ಠಾನಕ್ಕೆ ತರಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಸಾಧನೆಗಳನ್ನು ಪುಸ್ತಕಗಳ ನೆರವಿಲ್ಲದೆ  ಹೇಳುವಂತಹ ಅಧಿಕಾರಿ ಗಳಿರಬೇಕು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಇನ್ನಷ್ಟು ವೇಗದಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು. ಎಕ್ಸಿಕ್ಯೂಟಿವ್ ಇಂಜಿನಿಯರ್ಗಳೆಂದರೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ವರದಿ ನೀಡಬೇಕು; ಸ್ಥಳದಲ್ಲೇ ಕುಳಿತು ವರದಿ ನೀಡುವವರಾಗಬಾರದು ಎಂದರು.

ಜಿಲ್ಲೆಯಲ್ಲಿ ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ 10 ಗ್ರಾಮಗಳ 60 ಜನವಸತಿ ಪ್ರದೇಶಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಪಿಆರ್ಇಡಿ ಇಂಜಿನಿಯರ್ ಮಾಹಿತಿ ನೀಡಿದರು. ಯೋಜನೆಯ ಸುಸ್ಥಿರ ಅಭಿವೃದ್ಧಿಗೆ ಅಳವಡಿಸಲಾಗಿರುವ ಕ್ರಿಯಾ ಯೋಜನೆಯ ಚಿತ್ರಣ ನೀಡಿ ಎಂದ ಪೊನ್ನುರಾಜ್, ಯೋಜನೆ ಅನುಷ್ಠಾನದಷ್ಟೆ ಮುಖ್ಯ ನಿರಂತರ ಸದುಪಯೋಗ; ಬಗ್ಗೆ ಇಂಜಿನಿಯರ್ಗಳಿಗೆ ಕಾಳಜಿ ಇರಬೇಕೆಂದರು.

ಇದೇ ಮಾದರಿಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ  ಗುರಿ ಸಾಧನೆಗಳ ಬಗ್ಗೆ ವಿಸ್ತø ಚರ್ಚೆ ನಡೆದು, ಪ್ರಾಕೃತಿಕ ವಿಕೋಪದಡಿ ಕೈಗೊಂಡ ಕಾಮಗಾರಿಗಳನ್ನು ಬೇರೆ ಯೋಜನೆಗಳಡಿ ಸೇರಿಸಬೇಡಿ ಎಂದರು. ತಾವು ಪ್ರಗತಿ ಪರಿಶೀಲನೆ ನಡೆಸುವ ಉದ್ದೇಶವನ್ನು ಸ್ಪಷ್ಟವಾಗಿಸಿದ ಕಾರ್ಯದರ್ಶಿಗಳು, ಯೋಜನೆಗಳ ಅನುಷ್ಠಾನದಿಂದ ಅರ್ಹರಿಗೆ ನೆರವಾಗಬೇಕು; ಅಭಿವೃದ್ಧಿಯಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಸೆಲ್ವಮಣಿ ಆರ್. ಅವರು, ನರೇಗಾದಡಿ ಕೈಗೊಂಡ ಕಾಮಗಾರಿಗಳ ಬಗ್ಗೆ ಯೋಜನೆಯಡಿ ನಿರ್ಮಾಣಗೊಂಡ ಆಸ್ತಿಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ವಸತಿ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದರು. ನಗರಾಭಿವೃದ್ಧಿನಗರೋತ್ಥಾನದ ಬಗ್ಗೆ, ಸ್ವಚ್ಛ ಭಾರತ್ ಮಿಷನ್, ಆಹಾರ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಮೆಸ್ಕಾಂಗಳ ಪ್ರಗತಿಯನ್ನು ಪರಿಶೀಲಿಸಿದರು. ವೆನ್ಲಾಕ್ ಆಸ್ಪತ್ರೆಯ ಬೇಡಿಕೆಗಳ ಬಗ್ಗೆ ಆಸ್ಪತ್ರೆಯ ಅಧೀಕ್ಷಕರಾದ ಡಾ ರಾಜೇಶ್ವರಿ ದೇವಿ ಅವರು ಉಸ್ತುವಾರಿ ಕಾರ್ಯದರ್ಶಿಗಳ ಗಮನಸೆಳೆದರು. ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರ ಬೇಡಿಕೆಯ ಬಗ್ಗೆ ಅಪರ ಜಿಲ್ಲಾಧಿಕಾರಿ ಕುಮಾರ್ ಅವರು ವಿವರಿಸಿದರುಸಹಕಾರಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಕೌಶಲ್ಯಾಭಿವೃದ್ಧಿಯ ಬಗ್ಗೆಯೂ ಪರಿಶೀಲನೆ ನಡೆಸಿದರಲ್ಲದೆ, ಕಂದಾಯ ಇಲಾಖೆಯ ಪ್ರತ್ಯೇಕ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಸಸಿರಾಜ್ ಸೆಂಥಿಲ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಚುನಾವಣೆ, ಪ್ರಾಕೃತಿಕ ವಿಕೋಪಗಳೆಲ್ಲವನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಪ್ರಗತಿ ಪರಿಶೀಲನೆ ವೇಳೆ ಇಲಾಖಾಧಿಕಾರಿಗಳು ಸೂಕ್ತ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಿ ಸಾಧನೆಗಳ ವಿವರವನ್ನು ನೀಡಬೇಕೆಂದರು. ಸಿಇಒ ಜೊತೆ ಪ್ರತಿ ತಿಂಗಳು ತಾವು ಪ್ರಗತಿಪರಿಶೀಲನೆ ಮಾಡುವುದಾಗಿ ಹೇಳಿದರು. ಮಹಾನಗರಪಾಲಿಕೆ ಆಯುಕ್ತರಾದ ಮೊಹಮ್ಮದ್ ನಝೀರ್ ಉಪಸ್ಥಿತರಿದ್ದರು.

Pages