ಬಂಟರ ಸಂಘ ಅಹಮದಾಬಾದ್-ಗುಜರಾತ್ : ಅಧ್ಯಕ್ಷರಾಗಿ ನಿತೇಶ್ ಎಸ್. ಶೆಟ್ಟಿ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಸಂಘ ಅಹಮದಾಬಾದ್-ಗುಜರಾತ್ : ಅಧ್ಯಕ್ಷರಾಗಿ ನಿತೇಶ್ ಎಸ್. ಶೆಟ್ಟಿ ಆಯ್ಕೆ

Share This
BUNTS NEWS, ಅಹಮದಾಬಾದ್: ಬಂಟರ ಸಂಘ ಅಹಮದಾಬಾದ್-ಗುಜರಾತ್ ಇದರ 2018-20ರ ಅವಧಿಯ ನೂತನ ಅಧ್ಯಕ್ಷರಾಗಿ ನಿತೇಶ್ ಎಸ್. ಶೆಟ್ಟಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸಂಘದ ನಿಕಟಪೂರ್ವ ಅಧ್ಯಕ್ಷ ಅಪ್ಪು ಪಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ 2018-20 ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಂಘದ ಉಪಾಧ್ಯಕ್ಷರಾಗಿ ಶಕುಂತಳ ಐ. ಶೆಟ್ಟಿ ಮತ್ತು ರವಿರಾಜ ಶೆಟ್ಟಿ, ಕಾರ್ಯದರ್ಶಿಗಳಾಗಿ ಕಿರಣ್ ಶೆಟ್ಟಿ, ಖಜಾಂಚಿಯಾಗಿ ಪ್ರಶಾಂತ್ ನಾಯಕ್, ಸಹಖಜಾಂಚಿಯಾಗಿ ದೇವಿಪ್ರಸಾದ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ರವೀಂದ್ರ ಕೆ. ಶೆಟ್ಟಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಮಾಜಿ ಅಧ್ಯಕ್ಷ ನಾರಾಯಣ ರೈ ಕಾರ್ಯಕ್ರಮ ನಿರೂಪಿಸಿದರು.

Pages