ಶ್ರೀಮಂತ ಬಂಟರು ಸಮಾಜದ ಬಡವರಿಗೆ ಸಹಾಯ ಹಸ್ತ ನೀಡಲು ಮುಂದಾಗಬೇಕು : ಐಕಳ ಹರೀಶ್ ಶೆಟ್ಟಿ ಮನವಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶ್ರೀಮಂತ ಬಂಟರು ಸಮಾಜದ ಬಡವರಿಗೆ ಸಹಾಯ ಹಸ್ತ ನೀಡಲು ಮುಂದಾಗಬೇಕು : ಐಕಳ ಹರೀಶ್ ಶೆಟ್ಟಿ ಮನವಿ

Share This
BUNTS NEWS, ಅಹಮದಾಬಾದ್: ಬಂಟ ಸಮಾಜದ ಶ್ರೀಮಂತರು ಸಮಾಜದ ಬಡವರನ್ನು ಗುರುತಿಸಿ ಸಹಾಯ ಹಸ್ತವನ್ನು ನೀಡುವ ಮೂಲಕ ಇಡೀ ಬಂಟ ಸಮಾಜವನ್ನು ಬಡತನ ಮುಕ್ತ ಸಮಾಜವನ್ನಾಗಿ ಮಾಡಲು ಕೈಜೋಡಿಸವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಕೋರಿದ್ದಾರೆ.
ಅವರು ಪಂಡಿತ್ ದೀನದಯಾಳ್ ಆಡಿಟೋರಿಯಂನಲ್ಲಿ ನಡೆದ ಬಂಟರ ಸಂಘ ಅಹಮದಾಬಾದ್-ಗುಜರಾತ್ ಇದರ ಬೆಳ್ಳಿಹಬ್ಬ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷ ಅಪ್ಪು ಪಿ. ಶೆಟ್ಟಿ ಅವರು ಮಾತನಾಡಿ, ತನ್ನ ಅಧಿಕಾರವಧಿಯಲ್ಲಿ ತನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ನಮಿಸಿ ಮುಂದೆಯೂ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸಬೇಕೆಂದು ಕೋರಿದರು.

ಸನ್ಮಾನ : ಕಾರ್ಯಕ್ರಮದಲ್ಲಿ ರಾಷ್ಟ ಹಾಗೂ ಅಂತರಾಷ್ಟ್ರೀಯ ಮಟ್ಟದ ಸೆಲೆಬ್ರಲ್ ಪೇಲ್ಸಿ ಭಾಧಿತರ ಓಟದಲ್ಲಿ ಸಾಧನೆ ಮಾಡಿದ ಗೌತಮ್ ಶೇಖರ ಶೆಟ್ಟಿ, ಭರತನಾಟ್ಯದಲ್ಲಿ ರಂಗಪ್ರವೇಶ ಮಾಡಿದ ಕುಮಾರಿ ಋತಿಕಾ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರುಗಳಾದ ಅಜೆಕಾರು ಸಂಜೀವ ಶೆಟ್ಟಿ, ದೇವದತ್ತ ಎನ್. ಶೆಟ್ಟಿ, ಸುಧಾಕರ ಎಸ್. ಶೆಟ್ಟಿ, ನಾರಾಯಣ ರೈ ಹಾಗೂ ಪತ್ರಕರ್ತ ಎಮ್.ಎಸ್ ರಾವ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಮೇಶ ಮಿಜಾರು ಅವರ ತಂಡದಿಂದ ‘ಪಾಂಡುನ ಅಲಕ್ಕದ್ ಪೋಂಡು’ ತುಳು ನಾಟಕ ಪ್ರದರ್ಶನ ನಡೆಯಿತು.
ಸಭೆಯಲ್ಲಿ ಸಂಘದ ಕಾರ್ಯದರ್ಶಿ ನಿತೇಶ್ ಶೆಟ್ಟಿ ಅವರು ಕಳೆದ 2 ವರ್ಷದ ಲೆಕ್ಕಪತ್ರವನ್ನು ಮಂಡಿಸಿದರು. ನಂತರ ಮುಂದಿನ 2 ವರ್ಷದ ಅವಧಿಗೆ ಸಂಘದ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ ಅವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಮಾರಂಭದಲ್ಲಿ ಕರ್ನಾಟಕ ಸಂಘ, ತುಳು ಸಂಘಗಳ ಮಾಜಿ ಅಧ್ಯಕ್ಷ ಸುರತ್ಕಲ್ ಜಯರಾಮ ಶೆಟ್ಟಿ, ತುಳು ಸಂಘ ಬರೋಡಾ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ, ಸೂರತ್ ಹೊಟೇಲ್ ಉದ್ಯಮಿ ರಾಧಾಕೃಷ್ಣ ಶೆಟ್ಟಿ, ಮುಂಬಯಿ ಬಂಟರ ಸಂಘದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಕರ್ನೂರು ಮೋಹನ ರೈ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಪವಿತ್ರ ಎಸ್. ಶೆಟ್ಟಿ ಪ್ರಾರ್ಥಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಅಜಿಕಾರು ಸಂಜೀವ ಶೆಟ್ಟಿ ಸ್ವಾಗತಿಸಿದರು. ಕರ್ನೂರು ಮೋಹನ ರೈ ಹಾಗೂ ನಾರಾಯಣ ರೈ ಕಾರ್ಯಕ್ರಮ ನಿರೂಪಿಸಿದರು.

Pages