ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಕುಂದಾಪುರ ಆಶ್ರಯ ಯೋಜನೆ ಫಲಾನುಭವಿಗಳ ಮನೆ ಭೇಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಕುಂದಾಪುರ ಆಶ್ರಯ ಯೋಜನೆ ಫಲಾನುಭವಿಗಳ ಮನೆ ಭೇಟಿ

Share This

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ಕೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಂದ ಶ್ಲಾಘನೆ

BUNTS NEWS, ಕುಂದಾಪುರ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಚಿ ಮತ್ತು ಅವರ ತಂಡ ಕುಂದಾಪುರದ ಉಳ್ತೂರು, ಮಲ್ಯಾಡಿ, ಬೇಳೂರು ಹಾಗೂ ಶಂಕರನಾರಾಯಣದಲ್ಲಿ ಒಕ್ಕೂಟದ ಆಶ್ರಯ ಯೋಜನೆಯ ಫಲಾನುಭವಿಗಳ ವಾಸ್ತವದ ಸ್ಥಿತಿಯನ್ನು ತಿಳಿಯುವ ಸಲುವಾಗಿ ನ.10ರಂದು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.
ಈ ಸಂದರ್ಭ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಗಳ ಬಗ್ಗೆ ಕೇಳಿ ತಿಳಿದಿದ್ದೆ ಆದರೆ ಇಂದು ಬಂದು ಸ್ವತ: ನೋಡಿದ್ದೇನೆ ಎಂದು ಒಕ್ಕೂಟದ ಜನಪರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಾತ್ರವಲ್ಲದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ತಂಡಕ್ಕೆ ಅಭಿನಂದಿಸಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿ ಬಹಳ ಸಂಭ್ರಮದಿಂದ ಬೀಳ್ಕೊಟ್ಟರು.

ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಜಯ ಪ್ರಸಾದ್ ಆಳ್ವಾ, ನಿರ್ದೇಶಕ ಕರ್ನಿರೆ ವಿಶ್ವನಾಥ್ ಶೆಟ್ಟಿ ಹಾಗೂ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಮಾಡಿದ ಒಕ್ಕೂಟದ ಪೋಷಕ ಸದಸ್ಯ ಉಳ್ತೂರು ಮೋಹನ್ ದಾಸ್ ಶೆಟ್ಟಿ ಮತ್ತು ಸುರೇಶ್ ಶೆಟ್ಟಿ ಸೂರಿಂಜೆ, ಕುಂದಾಪುರ ಯುವ ಬಂಟರ ಸಂಘದ ಅಧ್ಯಕ್ಷರೂ ಹಾಗೂ ಒಕ್ಕೂಟದ ಆಡಳಿತ ಮಂಡಳಿ ಸದಸ್ಯ ಕೊಡ್ಲಾಡಿ ಪ್ರವೀಣ್ ಶೆಟ್ಟಿ, ಒಕ್ಕೂಟದ ಆಡಳಿತ ಮಂಡಳಿ ಸದಸ್ಯ ಅಂಪಾರು ನಿತ್ಯಾನಂದ ಶೆಟ್ಟಿ, ಕುಂದಾಪುರ ಯುವ ಬಂಟರ ಸಂಘದ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಪಂಚಾಯತ್ ಅಧ್ಯಕ್ಷರು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Pages