ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ

Share This
ಮಂಗಳೂರು: ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದ.ಕ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲು ಸರ್ವ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್ನಲ್ಲಿ ಜರುಗಿದ ಟಿಪ್ಪು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನ.10ರಂದು ಪೂರ್ವಾಹ್ನ10.30 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಉಪನ್ಯಾಸಕರ ಆಯ್ಕೆ ವೇದಿಕೆ, ವೇದಿಕೆ ಅಲಂಕಾರಕ್ಕೆ ಸೂಚನೆಯನ್ನು ನೀಡಲಾಯಿತು.

ಆಚರಣೆಯಲ್ಲಿ ಉಪನ್ಯಾಸಗಳು ಕೇಳುಗರಲ್ಲಿ ಜ್ಞಾನ ವೃದ್ಧಿಸುವಂತದುದಾಗಿರಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ, ಪೊಲೀಸ್ ಕಮಿಷನರ್ ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ, ಅಪರ ಜಿಲ್ಲಾಧಿಕಾರಿ ಕುಮಾರ್, ಮೂಡಾ ಕಮಿಷನರ್ ಶ್ರೀಕಾಂತ್ ರಾವ್ ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ರಾಜೇಶ್ ಬಿ., ಸಮುದಾಯದ ಗಣ್ಯರು, ವಿವಿಧ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Pages