ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ ಧನಸಹಾಯ, ಆಶ್ರಯ ಘೋಷಣಾ ಪತ್ರ ಹಂಚಿಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ ಧನಸಹಾಯ, ಆಶ್ರಯ ಘೋಷಣಾ ಪತ್ರ ಹಂಚಿಕೆ

Share This
BUNTS NEWS, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಶಕ್ತ ಬಂಟರಿಗಾಗಿ ನಿರ್ಮಾಣವಾಗುವ ಮನೆಗಳ ಮುಂದುವರಿಕೆಯ ಭಾಗವಾಗಿ ಅರ್ಹ ಫಲಾನುಭವಿಗಳಿಗೆ ‘ಆಶ್ರಯ ಯೋಜನೆಯ ಘೋಷಣಾ ಪತ್ರ’ವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಿತರಿಸಿದರು.
ಬಂಟರ ಯಾನೆ ನಾಡವರ ಮಾತೃಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯಕೀಯ, ಶೈಕ್ಷಣಿಕ ಇನ್ನಿತರ ಆರ್ಥಿಕ ಧನಸಹಾಯವನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಯಿತು.

ಈ ಸಂದರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿಜಯಪ್ರಸಾದ್ ಆಳ್ವಾ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಜತೆ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಪೋಷಕ ಸದಸ್ಯ ಉಳ್ತೂರು ಮೋಹನದಾಸ ಶೆಟ್ಟಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Pages