ಬೋಳಾರರ ಸ್ಮೃತಿ ಕಲಾವಿದರಿಗೆ ಸ್ಫೂರ್ತಿ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬೋಳಾರರ ಸ್ಮೃತಿ ಕಲಾವಿದರಿಗೆ ಸ್ಫೂರ್ತಿ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Share This

ಬೊಟ್ಟಿಕೆರೆ ಅವರಿಗೆ ಬೋಳಾರ ಪ್ರಶಸ್ತಿ ಪ್ರದಾನ

BUNTS NEWS, ಮಂಗಳೂರು: ಬೋಳಾರ ನಾರಾಯಣ ಶೆಟ್ಟರಂತಹ ಶ್ರೇಷ್ಠ ಕಲಾವಿದರು ಇಂದಿನ ಕಲಾವಿದರಿಗೆ ಸ್ಫೂರ್ತಿಯಾಗಿದ್ದು ಅಂತಹವರ ನೆನಪಿನಲ್ಲಿ ಯಕ್ಷಗಾನಕ್ಕೆ ಕಸುವು ತುಂಬುವ ಕಾರ್ಯಕ್ರಮಗಳು ನಿರಂತರ ನಡೆಯಬೇಕೆಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.
ಅವರು ಬೋಳಾರ ನಾರಾಯಣ ಶೆಟ್ಟಿ ಯಕ್ಷ ಪ್ರತಿಷ್ಠಾನದ ವತಿಯಿಂದ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ಇತ್ತೀಚಿಗೆ ಜರಗಿದ ಬೋಳಾರ ನಾರಾಯಣ ಶೆಟ್ಟಿ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಮರಣಾ ಜ್ಯೋತಿ ಬೆಳಗಿ ಅವರು ಆಶೀರ್ವಚನ ನೀಡಿದರು.

ಯಕ್ಷಾಂಗಣ ಮಂಗಳೂರು ಇದರ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು ಸಂಸ್ಮರಣಾ ಭಾಷಣ ಮಾಡಿ, ತೆಂಕುತಿಟ್ಟು ಯಕ್ಷರಂಗದಲ್ಲಿ ದೈತ್ಯ ಪ್ರತಿಭೆಯಾಗಿ ಅಭಿನವ ಕೋಟಿ ಎಂದು ಕರೆಸಿಕೊಂಡ ಬೋಳಾರ ನಾರಾಯಣ ಶೆಟ್ಟಿ ವರು ಕನ್ನಡ ಮತ್ತು ತುಳು ಪ್ರಸಂಗಗಳ ಚರಿತ್ರ ನಟ. ಅವರ ಹೆಸರಿನಲ್ಲಿ ಅವರ ಪುತ್ರ ಬೋಳಾರ ಕರುಣಾಕರ ಶೆಟ್ಟರು 2009ರಲ್ಲಿ ಸ್ಥಾಪಿಸಿದ ಪ್ರತಿಷ್ಠಾನವು 10ನೇ ವರ್ಷಕ್ಕೆ ಕಾಲಿರಿಸಿದ್ದು ಇದುವರೆಗೆ 18 ಕಲಾವಿದರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದೆ ಎಂದರು.

ಸಂದರ್ಭ ಹಿರಿಯ ಭಾಗವತ ಮತ್ತು ಪ್ರಸಂಗಕರ್ತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಮತ್ತು ಶೋಭಾ ಪೂಂಜ ದಂಪತಿಗೆಬೋಳಾರ ದಶಮಾನ ಪ್ರಶಸ್ತಿಯನ್ನು ಒಡಿಯೂರು ಶ್ರೀ ಪ್ರದಾನ ಮಾಡಿದರು. ಟೈಮ್ಸ್ಗ್ರೂಪಿನ ಪ್ರಸರಣಾಧಿಕಾರಿ ಕದ್ರಿ ನವನೀತ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಕೆ. ಲಕ್ಷ್ಮೀ ನಾರಾಯಣ ರೈ ಹರೇಕಳ ಸನ್ಮಾನ ಪತ್ರ ವಾಚಿಸಿದರು.

ಕಾರ್ಯಕ್ರಮದಲ್ಲಿ ಸಾಧ್ವಿ ಮಾತಾನಂದಮಯಿ, ವೈದಿಕ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್, ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಅತಿಥಿಗಳಾಗಿದ್ದರು. ಬೋಳಾರ ಪ್ರತಿಷ್ಠಾನದ ಸಂಚಾಲಕ ಬೋಳಾರ ಕರುಣಾಕರ ಶೆಟ್ಟಿ, ಜಯಶೀಲ ಧನಂಜಯ ಶೆಟ್ಟಿ, ವಾಸುದೇವ ಆರ್.ಕೊಟ್ಟಾರಿ, ಬೋಳಾರ ಗೋಪಾಲ ಶೆಟ್ಟಿ , ಕೀರ್ತನ್ ಶೆಟ್ಟಿ, ಕಿಶನ್ ಶೆಟ್ಟಿ ಉಪಸ್ಥಿತರಿದ್ದರುಯಶವಂತ ವಿಟ್ಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸದಾಶಿವ ಅಳಿಕೆ ವಂದಿಸಿದರು.

Pages