ಡಿ.19,20ರಂದು ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ “ಶಕ್ತಿ ಫೆಸ್ಟ್ 2018” ಸಾಂಸ್ಕೃತಿಕ ಸ್ಪರ್ಧೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಡಿ.19,20ರಂದು ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ “ಶಕ್ತಿ ಫೆಸ್ಟ್ 2018” ಸಾಂಸ್ಕೃತಿಕ ಸ್ಪರ್ಧೆ

Share This
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಪಿ.ಯು. ಕಾಲೇಜಿನಲ್ಲಿ ಡಿ.19,20ರಂದು ದ.ಕ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 1-10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶಕ್ತಿ ವಸತಿಯುಕ್ತ ಶಾಲೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಅವರು ಮಾಹಿತಿ ನೀಡಿದರು. ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಆಯಾ ತರಗತಿಗಳಿಗೆ ಅನುಗುಣವಾಗಿ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಪ್ರತೀ ವಿಭಾಗದಲ್ಲಿ ಒಟ್ಟು 10 ಸ್ಪರ್ಧೆಗಳಿದ್ದು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನಗದು ಅಥವಾ ಪುಸ್ತಕ ರೂಪದಲ್ಲಿ ನೀಡಲಾಗುವುದು, ಎಲ್ಲಾ ಸ್ಪರ್ಧೆಗಳಲ್ಲಿ ಒಟ್ಟಾಗಿ ರೂ.1,25,000ರಷ್ಟು ಮೊತ್ತದ ಪುಸ್ತಕ ಹಾಗೂ ನಗದನ್ನು ಸ್ಪರ್ಧೆಯ ದಿನಗಳಂದೇ ಸಮಾರೋಪ ಸಮಾರಂಭದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.

ಈ ಫೆಸ್ಟ್ನಲ್ಲಿ ಇಂಗ್ಲೀಷ್, ಕನ್ನಡ, ಹಿಂದಿ ಭಾಷೆಗಳ ಹಾಡುಗಳನ್ನು ನಟಿಸುವುದರೊಂದಿಗೆ ಹಾಡುವುದು, ಕತೆ ಹೇಳುವುದು, ಚಿತ್ರಕಲೆ, ಕನ್ನಡ ಭಾವಗಾನ, ಕಸದಿಂದ ರಸ, ಕೊಲಾಝ್, ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮ, ಛದ್ಮವೇಷ, ಸ್ಪೆಲ್ ಬೀ, ರಸಪ್ರಶ್ನೆ, ಕನ್ನಡ, ಹಿಂದಿ, ಇಂಗ್ಲೀಷ್ನಲ್ಲಿ ಭಾಷಣ, ದಾಸರ ಪದಗಳು, ಪೋಸ್ಟರ್ ಮೇಕಿಂಗ್, ಬೆಂಕಿಯಿಲ್ಲದೆ ಅಡುಗೆ, ಸಾಯನ್ಸ್ ಪ್ರಾಜೆಕ್ಟ್ ಮೊದಲಾದ ಸ್ಪರ್ಧೆಗಳಲ್ಲಿ ಒಂದು ಸಂಸ್ಥೆಯಿಂದ ಓರ್ವ ವಿದ್ಯಾರ್ಥಿ, 1 ತಂಡ (ಸಮೂಹವಾಗಿದ್ದಲ್ಲಿ) ಒಂದು ವಿಷಯದಲ್ಲಿ ಮಾತ್ರ ಭಾಗವಹಿಸಬಹುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ, ಅವರ ಶಿಕ್ಷಕರಿಗೆ ಊಟ, ತಿಂಡಿಯ ವ್ಯವಸ್ಥೆ ಮಾಡಲಾಗುವುದು.

ಸುದ್ದಿಗೋಷ್ಠಿಯಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮೊಕ್ತೇಸರರು ಕೆ,ಸಿ ನಾೈಕ್ ,  ಶ್ರೀಮತಿ ವಿದ್ಯಾ ಕಾಮತ್ ಜಿ, ಶಕ್ತಿ ಪ ಪೂ ಕಾಲೇಜು ಪ್ರಾಂಶುಪಾಲ ಪ್ರಭಾಕರ ಜಿ.ಎಸ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಪ್ರಧಾನ ಸಲಹೆಗಾರ ರಮೇಶ .ಕೆ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Pages