ಮಕ್ಕಳು ಶಿಕ್ಷಣದ ಜತೆಗೆ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು : ಕದ್ರಿ ನವನೀತ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಕ್ಕಳು ಶಿಕ್ಷಣದ ಜತೆಗೆ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು : ಕದ್ರಿ ನವನೀತ ಶೆಟ್ಟಿ

Share This

ಕಳವಾರು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಸುರತ್ಕಲ್: ಮಕ್ಕಳು ಕೇವಲ ಶಿಕ್ಷಣ ಪಡೆದರೆ ಸಾಲದು, ವಿದ್ಯೆಯ ಜೊತೆಗೆ ವಿನಯ, ನಮ್ಮ ಪರಿಸರ, ದೇಶದ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ದಿ ಟೈಮ್ಸ್ ಆಫ್ ಇಂಡಿಯ ಪತ್ರಿಕೆಯ ಉಪಮಹಾ ಪ್ರಬಂದಕ ಕದ್ರಿ ನವನೀತ ಶೆಟ್ಟಿ ಹೇಳಿದರು.
ಅನುದಾನಿತ ಕಳುವಾರು ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಳೆ ವಿದ್ಯಾರ್ಥಿ ಸಂಘ ಹಾಗೂ ಕಳುವಾರು ಅಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡು  ಪ್ರತಿಭಾ ಪುರಸ್ಕಾರದಾನಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯ ಅತಿಥಿಗಳಾದ ಡಾ. ನಂದಕಿಶೋರ್ ಮಾತನಾಡಿ, 134 ವರ್ಷ ಕಂಡಂತಹ ಅತ್ಯುತ್ತಮ ಸಂಸ್ಕೃತಿಯನ್ನು ಕಲಿಸುತ್ತಿರುವ ಕನ್ನಡ ಶಾಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಎಲ್ಲರೂ ಕೈಜೋಡಿಸೋಣ ಎಂದರು. ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ತಳಮಟ್ಟದಲ್ಲೇ ಆಂಗ್ಲ ಮಾಧ್ಯಮದ ಬಗ್ಗೆ ಅತ್ತ್ಯುತ್ತಮವಾಗಿ ಮಕ್ಕಳಗೆ ವಿದ್ಯಾಭ್ಯಾಸ ನೀಡುತ್ತಿರುವ ವಿದ್ಯಾ ಸಂಸ್ಥೆಗೆ ಸ್ಥಳೀಯರು ತಮ್ಮ ಮಕ್ಕಳನ್ನು ದಾಖಲಿಸಿ ವಿದ್ಯಾ ದೇಗುಲವನ್ನು ಅಭಿವೃದ್ಧಿ ಪಡಿಸುವಲ್ಲಿ ಎಲ್ಲರೂ ಸಹಕರಿಸಬೇಕೆಂದು  ಉಷಾ ಗುರುರಾಜ್ ಕರೆ ನೀಡಿದರು. ಸಮಾರಂಭದಲ್ಲಿ  ಗಂಗಾಧರ ಪೂಜಾರಿ ಬಾಳ ಪಲ್ಲಡೆ, ಕದ್ರಿ ನವನೀತ ಶೆಟ್ಟಿ, ಡಾ. ನಂದಕಿಶೋರ್, ಉಷಾ ಗುರುರಾಜ್, ಬಿ.ಎನ್. ಮೂರ್ತಿ ರವರನ್ನು ಸನ್ಮಾನಿಸಲಾಯಿತು.

ಶಾಲೆಯ ಹಳೇ ವಿದ್ಯಾರ್ಥಿ, ಮಾಜಿ ಸೈನಿಕ  ಕೇಶವ ಅಂಚನ್ ತನ್ನ ಶಾಲಾಭಿನಂದನೆಯಲ್ಲಿ ಶಾಲೆಯ ಗುರುಗಳನ್ನು ನೆನೆಸಿಕೊಳ್ಳತ್ತಾ, ಉತ್ತಮ ಗುಣಮಟ್ಟದ ಸಂಸ್ಕೃತಿಯ ವಿದ್ಯಾಭ್ಯಾಸದ ಫಲವಾಗಿ ದೇಶದೆಲ್ಲೆಡೆ ತಿರುಗಿ ದೇಶ ಸೇವೆ ಮಾಡುವ ಭಾಗ್ಯ ನನ್ನದಾಯಿತು ಎಂದರು.

ಟ್ರಸ್ಟಿನ ಕಾರ್ಯದರ್ಶಿ  ಬಿ ಲಕ್ಷ್ಮೀಶ ರಾವ್  ಟ್ರಸ್ಟಿನ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು.ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ  ಧ್ವಜಾರೋಹಣ ಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಟ್ರಸ್ಟಿನ ಟ್ರಸ್ಟಿನ ಅಧ್ಯಕ್ಷ ಬಿ.ರಾಧಾಕೃಷ್ಣ ರಾವ್, ಮುಖ್ಯೋಪಾದ್ಯಾಯಿನಿ ಶೋಭಾ ಸಿ., ನಿವೃತ್ತ ಮುಖ್ಯೋಪಾದ್ಯಾರು ಹಾಗೂ ಟ್ರಸ್ಟಿ ಬಿ.ರವೀಂದ್ರ ರಾವ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.  ಎಸ್.ಡಿ.ಎಂ.ಸಿ. ಅಧ್ಯಕ್ಷ ಗಂಗಾಧರ ಪೂಜಾರಿ ಸ್ವಾಗತಿಸಿದರು. ಮುಖ್ಯೋಪಾದ್ಯಾಯಿನಿಯವರು ಶಾಲಾ ವರದಿ, ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ವರದಿಯನ್ನು ದೀಪಕ್ ಕೋಟ್ಯಾನ್ ವಾಚಿಸಿದರು. ಅಭಿನೇತ್ರಿ ಮಕ್ಕಳ ಶೈಕ್ಷಣಿಕ ಹಾಗೂ ಹಳೆ ವಿದ್ಯಾರ್ಥ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವಿವಿಧ ಆಟ ಪಂದ್ಯಾಟಗಳ ಬಹುಮಾನ ವಿತರಣೆಯ ಕಾರ್ಯಕ್ರಮ ನಡೆಸಿಕೊಟ್ಟರು.        

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ರಾಘವ ಸನಿಲ್ ವಂದಿಸಿದರು. ತೇಜಸ್ವಿ ಕಾರ್ಯಕ್ರಮ ನಿರೂಪಿಸಿದರು.

Pages