ಪೋಷಕರು ಮಕ್ಕಳೊಂದಿಗೆ ಸದಾ ಸ್ನೇಹಿತರಂತೆ ಇರಬೇಕು : ಡಾ. ವಿರೂಪಾಕ್ಷ ದೇವರಮನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪೋಷಕರು ಮಕ್ಕಳೊಂದಿಗೆ ಸದಾ ಸ್ನೇಹಿತರಂತೆ ಇರಬೇಕು : ಡಾ. ವಿರೂಪಾಕ್ಷ ದೇವರಮನೆ

Share This
ಮಂಗಳೂರು: ಮಕ್ಕಳೊಂದಿಗೆ ಪೋಷಕರು ಕಳೆಯುವ ಸಮಯ ಕನಿಷ್ಠ ಹಂತಕ್ಕೆ ತಲುಪಿದ್ದು ಮಕ್ಕಳು ಬೆಳೆಯುವ ಹಂತದಲ್ಲಿ ಹಲವಾರು ವಿಷಯಗಳಿಂದ ವಂಚಿತರಾಗುತ್ತಾರೆ ಎಂದು ನಾಡಿನ ಹೆಸರಾಂತ ಮನೋವೈದ್ಯ ಹಾಗೂ ಆಪ್ತ ಸಲಹೆಗಾರ ಉಡುಪಿಯ ಡಾ. . ವಿ ಬಾಳಿಗಾ ಆಸ್ಪತ್ರೆಯ ಡಾ. ವಿರೂಪಾಕ್ಷ ದೇವರಮನೆ ಹೇಳಿದರು.
ಅವರು ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಮಾತನಾಡಿ, ಅಂಕ, ಸ್ಪರ್ಧೆಗಳಲ್ಲಿ ಮುನ್ನಡೆಗಾಗಿ ಮಕ್ಕಳ ಮೇಲೆ ಯಾವುದೇ ಒತ್ತಡ ಹೇರಬಾರದು. ಇದರಿಂದ ಮಕ್ಕಳ ಮೇಲೆ ವ್ಯತಿರಿಕ್ತ ಪ್ರಭಾವ ಬೀರುವುದಲ್ಲದೆ ಅವರ ಬೌದ್ಧಿಕ ಬೆಳವಣಿಗಗೆ ಕುಂಠಿತಗೊಳ್ಳುವ ಸಾಧ್ಯತೆಯೂ ಇರುತ್ತದೆ. ಮಕ್ಕಳೊಂದಿಗೆ ಸದಾ ಸ್ನೇಹಿತರಾಗಿಯೇ ಇರಬೇಕು ಎಂದರು.

ಕಾರ್ಯಕ್ರಮವನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾೈಕ್,ಆಡಳಿತ ಮಂಡಳಿಯ ಟ್ರಸ್ಟಿ ಡಾ. ಮುರಳೀಧರ ನಾೈಕ್, ಶಾಲಾ ಪ್ರಾಚಾರ್ಯರಾಗಿರುವ ವಿದ್ಯಾ ಕಾಮತ್ ಜಿ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಪ್ರಧಾನ ಸಲಹೆಗಾರ ರಮೇಶ್ ಕೆ. ಉಪಸ್ಥಿತರಿದ್ದರು.

ಪಿ.ಯು ಕಾಲೇಜಿನ ಪ್ರಾಚಾರ್ಯರು ಪ್ರಭಾಕರ ಜಿ.ಎಸ್ ಸ್ವಾಗತಿಸಿದರು. ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕಿ ನಯನ ಪ್ರಸಾದ್ ವಂದಿಸಿದರು. ಕು. ಶಿಲ್ಪಾ ಪಿ ಕಾರ್ಯಕ್ರಮ ನಿರೂಪಿಸಿದರು.

Pages