ಬಂಟೆರೆ ಕಲಾ ಪಂಥ ಸ್ಪರ್ಧೆ : ಸುರತ್ಕಲ್ ಬಂಟರ ಸಂಘಕ್ಕೆ ಪ್ರಥಮ ಪ್ರಶಸ್ತಿ, 1 ಲಕ್ಷ ರೂ. ನಗದು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟೆರೆ ಕಲಾ ಪಂಥ ಸ್ಪರ್ಧೆ : ಸುರತ್ಕಲ್ ಬಂಟರ ಸಂಘಕ್ಕೆ ಪ್ರಥಮ ಪ್ರಶಸ್ತಿ, 1 ಲಕ್ಷ ರೂ. ನಗದು

Share This
BUNTS NEWS, ಸುರತ್ಕಲ್: ಬಂಟವಾಳ ಬಂಟರ ಸಂಘದ ಆಶ್ರಯದಲ್ಲಿ ಬಂಟವಾಳ ಬಂಟರ ಭವನದಲ್ಲಿ ನಡೆದಬಂಟೆರೆ ಕಲಾ ಪಂಥಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘವು ಪ್ರಥಮ ಪ್ರಶಸ್ತಿ ಹಾಗೂ 1 ಲಕ್ಷ ರೂ. ನಗದನ್ನು ತನ್ನದಾಗಿಸಿದೆ.
ನಿಲೆದಾಂತಿ ಬದ್ಕ್ಗ್ ಬಿಲೆ ಕೊರ್ಕಎನ್ನುವ 20 ನಿಮಿಷಗಳ ಕಾಲಾವಧಿಯ ಪ್ರಹಸನದಲ್ಲಿ ಸುರತ್ಕಲ್  ಬಂಟರ ಸಂಘದ 30 ಮಂದಿ ಸದಸ್ಯರು ಮಂಗಳಮುಖಿಯರ ಬದುಕಿನ ಕಷ್ಟ-ಸುಖಗಳನ್ನು, ಸಮಾಜದಲ್ಲಿ ಎದುರಿಸುವ ಸಮಸ್ಯೆಗಳನ್ನು ಮನೋಜ್ಞವಾಗಿ ಬಿಂಬಿಸಿದ ಕಲಾಪ್ರಕಾರ ಎಲ್ಲರ ಪ್ರಶಂಸೆಗೆ ಕಾರಣವಾಗಿ ಪ್ರಶಸ್ತಿ ಗೆದ್ದುಕೊಂಡಿದೆ.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗೋಲ್ಡ್ಪಿಂಚ್ಮಾಲಕ ಕೆ. ಪ್ರಕಾಶ್ ಶೆಟ್ಟಿ , ಉದ್ಯಮಿ ರತ್ನಾಕರ ಶೆಟ್ಟಿ ಮುಂಡ್ಕೂರು, ಬಂಟವಾಳ ಬಂಟರ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ, ಉಪಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಕಾರ್ಯದರ್ಶಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಜಗದೀಶ ಶೆಟ್ಟಿ ಇರಾಗುತ್ತು, ಜತೆ ಕಾರ್ಯದರ್ಶಿ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಮಹಿಳಾ ವಿಭಾಗದ ಅಧ್ಯಕ್ಷೆ ಆಶಾ ಪಿ. ರೈ, ಮಾಜಿ ಸಚಿವ ಬಿ. ರಮಾನಾಥ ರೈ, ಸಂಗೀತ ನಿರ್ದೇಶಕ ಗುರುಕಿರಣ್, ಸಾಂಸ್ಕøತಿಕ ಸಮಿತಿ ಸಂಚಾಲಕ ಸತೀಶ ಶೆಟ್ಟಿ ಪಟ್ಲ ಮೊದಲಾದವರು ಉಪಸ್ಥಿತರಿದ್ದರು.
ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ , ನಿಕಟ ಪೂರ್ವ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ, ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ, ಕಾರ್ಯದರ್ಶಿ ಲೋಕಯ್ಯ ಶೆಟ್ಟಿ ಮುಂಚೂರು, ಸಾಂಸ್ಕøತಿಕ ಕಾರ್ಯದರ್ಶಿ ಕಿರಣ್ ಪ್ರಸಾದ್ ರೈ, ಲೀಲಾಧರ ಶೆಟ್ಟಿ ಕಟ್ಲ, ವಿನೋದ್ ಶೆಟ್ಟಿ ಮೊದಲಾದವರು ಪ್ರಶಸ್ತಿ ಸ್ವೀಕರಿಸಿದರು.

ತೀರ್ಪುಗಾರರಾಗಿ ಸಂಗೀತ ನಿರ್ದೇಶಕ ಗುರುಕಿರಣ್, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಚಲನಚಿತ್ರ ನಟಿ ನೀತೂ ಶೆಟ್ಟಿ ಭಾಗವಹಿಸಿದ್ದರು. ಕದ್ರಿ ನವನೀತ ಶೆಟ್ಟಿ ಸಾಂಸ್ಕøತಿಕ ಕಾರ್ಯಕ್ರಮವನ್ನು ನಿರೂಪಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

Pages