ಜಾತಿ ಭೇದವಿಲ್ಲದೆ ಬಡವರ ಕಷ್ಟಕ್ಕೆ ಸ್ಪಂದಿಸುವುದೇ ದೇವರ ಕೆಲಸ : ಐಕಳ ಹರೀಶ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾತಿ ಭೇದವಿಲ್ಲದೆ ಬಡವರ ಕಷ್ಟಕ್ಕೆ ಸ್ಪಂದಿಸುವುದೇ ದೇವರ ಕೆಲಸ : ಐಕಳ ಹರೀಶ್ ಶೆಟ್ಟಿ

Share This
BUNTS NEWS, ಮಂಗಳೂರು: ಬೇರೆ ಬೇರೆ ಊರಿಂದ ಆಸ್ಪತ್ರೆಗೆ ಬಂದವರು ಹಸಿದ ಹೊಟ್ಟೆಯಲ್ಲಿ ಇರಬಾರದೆಂಬ ಉದ್ದೇಶದಿಂದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಕ್ಷೇಮಪಾಲಕರಿಗೆ ರಾತ್ರಿ ಊಟ ನೀಡುತ್ತಿರುವ ಎಂ ಫ್ರೆಂಡ್ಸ್ ಸಂಸ್ಥೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯ ಅಂಗವಾಗಿ ಅನುದಾನ ನೀಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಹೇಳಿದರು. 
ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅನುದಾನದಲ್ಲಿ ಎಂ ಫ್ರೆಂಡ್ಸ್ ಸಂಸ್ಥೆಯು ಡಿಸೆಂಬರ್ ತಿಂಗಳಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೀಡಿದ ರಾತ್ರಿ ಊಟದ ವಿತರಣೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಆಸ್ಪತ್ರೆಗೆ ಚಿಕಿತ್ಸೆ ಪಡೆಯುವ ಸಲುವಾಗಿ ಬರುವವರು ತುಂಬಾ ಬಡವರಾಗಿದ್ದು ಅಸ್ಪತ್ರೆ ನೋಂದಣಿಗೂ ಹಣವಿಲ್ಲದೆ ಸಂಕಷ್ಟದಲ್ಲಿರುತ್ತಾರೆ. ಜಾತಿ ಭೇದವಿಲ್ಲದೆ ಬಡವರ ಕಷ್ಟಕ್ಕೆ ಸ್ಪಂದಿಸುವುದು ದೇವರ ಕೆಲಸವಾಗಿದ್ದು ಅಂತಹ ಮಹತ್ಕಾರ್ಯ ಜಾಗತಿಕ ಬಂಟರ ಒಕ್ಕೊಟದಿಂದ ಆಗುತ್ತಿದೆ ಎಂದು ಒಕ್ಕೂಟದ ಹರ್ಷ ವ್ಯಕ್ತಪಡಿಸಿದರು.

ಸಂದರ್ಭದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಯವರು ಡಿಸೆಂಬರ್ ತಿಂಗಳ ರಾತ್ರಿ ಊಟದ ವೆಚ್ಚವನ್ನು ಭರಿಸುವ ಜಾಗತಿಕ  ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ರೂ.2.25 ಲಕ್ಷದ ಚೆಕ್ನ್ನು ಎಂ ಫ್ರೆಂಡ್ಸ್ ಕಾರುಣ್ಯ ಸಂಸ್ಥೆಗೆ ನೀಡಿದರು.

ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಎಂ ಫ್ರೆಂಡ್ಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಹಾಗೂ ಮುಖ್ಯ ಅತಿಥಿಗಳು ಸನ್ಮಾನಿಸಿದರು.

ಶಾಸಕ ವೇದವ್ಯಾಸ ಕಾಮತ್, ಮನಪಾ ಮೇಯರ್ ಭಾಸ್ಕರ್ ಕೆ, ಒಕ್ಕೂಟದ ಕಾರ್ಯದರ್ಶಿ ವಿಜಯ ಪ್ರಸಾದ್ ಆಳ್ವಾ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಒಕ್ಕೂಟದ ನಿರ್ದೇಶಕ ಕರ್ನಿರೆ ವಿಶ್ವನಾಥ್ ಶೆಟ್ಟಿ, ಹೇಮಂತ್ ಶೆಟ್ಟಿ, ಸುರೇಶ್ ಶೆಟ್ಟಿ ಸೂರಿಂಜೆ,  ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ. ರಾಜೇಶ್ವರಿದೇವಿ ಎಚ್.ಆರ್, ಪದ್ಮನಾಭ, ಎಂ ಫ್ರೆಂಡ್ಸ್ ಎನ್ಆರ್ ಸದಸ್ಯ ಡಾ..ಕೆ.ಕಾಸಿಂ, ಎಂಫ್ರೆಂಡ್ಸ್ ಅಧ್ಯಕ್ಷರು, ಪದಾಧಿಕಾರಿಗಳು, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸಿಬ್ಬಂದಿವರ್ಗದವರು ವೆನ್ಲಾಕ್ ಆಸ್ಪತ್ರೆಯ ರೋಗಿಗಳ ಕ್ಷೇಮಪಾಲಕರು ಹಾಗೂ ಇನ್ನಿತರು ಉಪಸ್ಥಿತರಿದ್ದರು.

Pages