ವಿಜಯ ಬ್ಯಾಂಕ್ ಹೆಸರು ಉಳಿಸುವಂತೆ ಸಂಸದ ನಳಿನ್’ರಿಂದ ಸಚಿವ ಜೇಟ್ಲಿಗೆ ಮನವಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಜಯ ಬ್ಯಾಂಕ್ ಹೆಸರು ಉಳಿಸುವಂತೆ ಸಂಸದ ನಳಿನ್’ರಿಂದ ಸಚಿವ ಜೇಟ್ಲಿಗೆ ಮನವಿ

Share This
ಬೆಂಗಳೂರು: ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಜಿಲ್ಲೆಯ ಪ್ರತಿಷ್ಠಿತ ವಿಜಯಾ ಬ್ಯಾಂಕ್ ನ್ನು ಬ್ಯಾಂಕ್ ಆಫ್ ಬರೋಡಾ ಮತ್ತು ಡೀನಾ ಬ್ಯಾಂಕುಗಳೊಂದಿಗೆ ವಿಲೀನ ಮಾಡಿರುವುದನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.
ಅಲ್ಲದೇ ವಿಲೀನಗೊಂಡ ಬ್ಯಾಂಕಿಗೆವಿಜಯಾ ಬ್ಯಾಂಕ್ಎಂದು ನಾಮಕರಣ ಮಾಡಿ ವಿಜಯಾ ಬ್ಯಾಂಕಿನ ಹೆಸರನ್ನು ಉಳಿಸಿಕೊಡುವಂತೆ ಸಂಸದರು ಸಚಿವರಿಗೆ ಮನವಿ ಮಾಡಿದ್ದು ಸಂಸದರ ಮನವಿಗೆ ಮಾನ್ಯ ಹಣಕಾಸು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಬಗ್ಗೆ ಪರಿಶೀಲಿಸುವ ಭರವಸೆ ನೀಡಿರುತ್ತಾರೆ.

ಈ ಸಂದರ್ಭ ಉಡುಪಿ-ಚಿಕ್ಕಮಗಳೂರು ಸಂಸದೆ ಕು. ಶೋಭಾ ಕರಂದ್ಲಾಜೆ ಹಾಗೂ ಮುಂಬೈ ಸಂಸದ ಗೋಪಾಲ ಶೆಟ್ಟಿ ಜೊತೆಗಿದ್ದರು.

Pages