ನಾಳೆ ಬಂಟರ ಮಾತೃ ಸಂಘ ಬಂಟ್ಸ್ ಹಾಸ್ಟೆಲ್’ನಲ್ಲಿ ‘ಬಿಸು ಸಮ್ಮಿಲನ’ - BUNTS NEWS WORLD

ನಾಳೆ ಬಂಟರ ಮಾತೃ ಸಂಘ ಬಂಟ್ಸ್ ಹಾಸ್ಟೆಲ್’ನಲ್ಲಿ ‘ಬಿಸು ಸಮ್ಮಿಲನ’

Share This
BUNTS NEWS, ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ(ರಿ), ಮತ್ತು ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಸಹಯೋಗದೊಂದಿಗೆಬಿಸು ಸಮ್ಮಿಲನ-2019’ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್’ನಲ್ಲಿರುವ ಗೀತಾ ಎಸ್.ಎಮ್. ಶೆಟ್ಟಿ ಸಭಾಭವನದಲ್ಲಿ ಎ.20 ಶನಿವಾರ ಸಂಜೆ 4 ಗಂಟೆಗೆ ನಡೆಯಲಿದೆ.

ಸಮಾರಂಭದ  ಅಧ್ಯಕ್ಷತೆಯನ್ನು ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ. ಮಾಹೆ  ವಿಶ್ರಾಂತ ಉಪಕುಲಪತಿ ಡಾ. ಬಿ.ಎಂ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಉಪನ್ಯಾಸ ನೀಡಲಿದ್ದಾರೆ. ಡಾ. ಅಮಿತಾ ಹೆಗ್ಡೆ  ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿನಿ ಭವಿಷ್ಯ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು.

ಸಮಾರಂಭದಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯ 13 ಬಂಟರ ಸಂಘಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಎಸ್. ಜಯರಾಮ ಸಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pages