ನೋಡುವ ನೋಟ ಮತ್ತು ಮಾಡುವ ಕ್ರಿಯೆ ಸಕಾರಾತ್ಮಕವಾಗಿದ್ದರೆ ಎಲ್ಲವೂ ಸುಸೂತ್ರ: ಪ್ರಕಾಶ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನೋಡುವ ನೋಟ ಮತ್ತು ಮಾಡುವ ಕ್ರಿಯೆ ಸಕಾರಾತ್ಮಕವಾಗಿದ್ದರೆ ಎಲ್ಲವೂ ಸುಸೂತ್ರ: ಪ್ರಕಾಶ್ ಶೆಟ್ಟಿ

Share This
BUNTS NEWS, ಪಡುಬಿದ್ರಿ: ನಾವು ನೋಡುವ ನೋಟ ಮತ್ತು ಮಾಡುವ ಕ್ರಿಯೆ ಸಕಾರಾತ್ಮಕವಾಗಿದ್ದರೆ ಎಲ್ಲವೂ ಸುಸೂತ್ರವೆನಿಸುತ್ತದೆ ಎಂದು ಬೆಂಗಳೂರು ಎಮ್.ಆರ್.ಜಿಗ್ರೂಪ್ಸ್ ಸಿಎಮ್ಡಿ ಕೆ.ಪ್ರಕಾಶ್ ಶೆಟ್ಟಿ ಹೇಳಿದರು.
ಭಾನುವಾರ ರಾತ್ರಿ ಪಡುಬಿದ್ರಿ ಬಂಟರ ಭವನದಲ್ಲಿ ಪಡುಬಿದ್ರಿ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪದಗ್ರಹಣ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಪಡುಬಿದ್ರಿ ಬಂಟರ ಸಂಘದ ನೂತನ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪುರವರಿಗೆ ಪ್ರಮಾಣವಚನ ಬೋಧಿಸಿ ಶುಭ ಹಾರೈಸಿದರು. ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ಮತ್ತು ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿಯವರಿಗೆ ಮಂಗಳೂರು ಬಂಟರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಪ್ರಮಾಣವಚನ ಬೋಧಿಸಿದರು.ಮಹಿಳಾ ವಿಭಾಗದ ಅಧ್ಯಕ್ಷೆ ನೇತ್ರಾವತಿ ಆರ್.ಶೆಟ್ಟಿಯವರಿಗೆ ಮುಂಬೈ ಬಂಟರ ಸಂಘದ ಮಹಿಳಾ ವಿಭಾಗದ ಉಪಾಧ್ಯಕ್ಷೆ ಉಮಾ ಕೆ.ಶೆಟ್ಟಿ ಪ್ರಮಾಣವಚನ ಬೋಧಿಸಿದರು.

ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಸಂಘದ 9 ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅತೀವ ಹರ್ಷವಾಗುತ್ತಿದೆ.ಮುಂದಿನ ದಿನಗಳಲ್ಲಿ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಸ್ವಯಂ ಭೇಟಿ ನೀಡಿ,ಪ್ರತಿಯೊಬ್ಬ ಬಂಟರೂ ಸಂಘಕ್ಕೆ ಸದಸ್ಯರಾಗಲು ಪ್ರೇರೇಪಿಸಲಾಗುವುದು.ಅದೇ ರೀತಿ ಸಮಾಜದ ಅಶಕ್ತರನ್ನು,ವಸತಿ ರಹಿತರನ್ನು,ಅನಾರೋಗ್ಯ ಪೀಡಿತರನ್ನು ಮತ್ತು ಪ್ರಾಯಕ್ಕೆ ಬಂದರೂ ಮದುವೆಯಾಗಲು ಅಸಾಧ್ಯವಾದವರನ್ನು ಗುರುತಿಸಿ ಅವರಿಗೆ ಪ್ರಾಮಾಣಿಕ ಸಹಾಯ ಮಾಡಲಾಗುವುದು.ಸಂಘದಲ್ಲಿ ದಿ.ಜಗನ್ನಾಥ ಶೆಟ್ಟಿ ಸ್ಮಾರಕ ಕಲ್ಯಾಣ ನಿಧಿ ಸ್ಥಾಪಿಸಲಾಗುವುದು.ಯುವಕರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಬಂಟ ಯುವ ವಿಭಾಗವನ್ನು ಪ್ರಾರಂಭಿಸಲಾಗುವುದು.ಸಂಘದ ಸಭಾಂಗಣವನ್ನು ಹವಾನಿಯಂತ್ರಿತಗೊಳಿಸಲಾಗುವುದು ಮತ್ತು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು.ಮುಖ್ಯವಾಗಿ ಬಂಟ ಗ್ರಾಮ ಸಭೆಗಳನ್ನು ಆಯೋಜಿಸಲಾಗುವುದು ಎಂದರು.

ಸನ್ಮಾನ: ಇದೇ ಸಂದರ್ಭ ನೂತನ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್ಬೆಟ್ಟು ಸಂತೋಷ್ ಶೆಟ್ಟಿ ಪುಣೆಯವರನ್ನು ಕುಟುಂಬ ಸದಸ್ಯರ ಉಪಸ್ಥಿತಿಯೊಂದಿಗೆ ಸನ್ಮಾನಿಸಲಾಯಿತು. ಬಂಟ ಸಮಾಜದ ಸಮಗ್ರ ಮಾಹಿತಿಯುಳ್ಳ ಬಂಟ ವಾಣಿ ಪುಸ್ತಕವನ್ನು ಸಂದರ್ಭ ಬಿಡುಗಡೆಗೊಳಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಮನೋಹರ ಶೆಟ್ಟಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.

ಮುಂಬೈ ಕೃಷ್ಣ ಪ್ಯಾಲೇಸ್ ರೆಸಿಡೆನ್ಸಿಯ ಎಮ್ಡಿ ಕೃಷ್ಣ ವೈ.ಶೆಟ್ಟಿ, ಸಾಯಿರಾಧಾ ಗ್ರೂಪ್ಸ್ ಸಿಎಮ್ಡಿ ರವಿ ಸುಂದರ ಶೆಟ್ಟಿ, ದಕ್ಷಿಣ ಭಾರತ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ, ಪಡುಬಿದ್ರಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ವೈ.ಶಶಿಧರ್ ಶೆಟ್ಟಿ, ಬಂಟರ ಸಂಘದ ಸಿರಿಮುಡಿ ದತ್ತಿನಿಧ ಗೌರವಾಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ,ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ ಜಿ.ಹೆಗ್ಡೆ, ಸುರೇಶ್ ಶೆಟ್ಟಿ ಮತ್ತು ನವೀನ್ಚಂದ್ರ ಜೆ.ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ನೇತ್ರಾವತಿ ಆರ್.ಶೆಟ್ಟಿ,ನಿಕಟಪೂರ್ವ ಅಧ್ಯಕ್ಷೆ ಅಕ್ಷತಾ ಸುರೇಂದ್ರ ಶೆಟ್ಟಿ, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು,ನಿರ್ಗಮನ ಕಾರ್ಯದರ್ಶಿ ಡಾ.ಮನೋಜ್ ಕುಮಾರ್ ಶೆಟ್ಟಿ,ಕೋಶಾಧಿಕಾರಿ,ರವಿ ಶೆಟ್ಟಿ ಗುಂಡ್ಲಾಡಿ, ನಿರ್ಗಮನ ಕೋಶಾಧಿಕಾರಿ ಶರತ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಡಾ.ಮನೋಜ್ಕುಮಾರ್ ಶೆಟ್ಟಿ ಸ್ವಾಗತಿಸಿದರು.ಅರ್ಪಿತಾ ಪಿ.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು. ಸಂದರ್ಭ ಸಂಘದ ಮಹಿಳಾ ವಿಭಾಗದ ಸದಸ್ಯೆಯರಿಂದ ನೃತ್ಯ ಪ್ರದರ್ಶನ ನಡೆಯಿತು.

Pages