Bunts News, ಮಂಗಳೂರು: ಖ್ಯಾತ ರಂಗಭೂಮಿ ಮತ್ತು ಸಿನಿಮಾ ನಟಿ ಶೋಭಾ ರೈ ಅವರಿಗೆ ಚೆನ್ನೈಯ ಇಂಟರ್ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ಘೋಷಿಸಿದೆ.
ಮೇ 26ರಂದು ಚೆನ್ನೈಯ ಹೊಸೂರಿನಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಇವರು ನಟಿಯಾಗಿ ಕಲೆಗೆ ನೀಡಿರುವ ಅಮೂಲ್ಯ ಸೇವೆಯನ್ನು ಪರಿಗಣಿಸಿ ಲಲಿತಕಲೆ ವಿಭಾಗದಲ್ಲಿ ಈ ಗೌರವಕ್ಕೆ ಇವರನ್ನು ಆರಿಸಲಾಗಿದೆ ಎಂದು ಇಂಟರ್ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿಯು ಪ್ರಕಟನೆಯಲ್ಲಿ ತಿಳಿಸಿದೆ.