ಗೆಳೆಯರ ಬಳಗ (ರಿ) ಬಲ್ಲಂಗುಡೇಲ್ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಕರಿಬೈಲ್ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಗೆಳೆಯರ ಬಳಗ (ರಿ) ಬಲ್ಲಂಗುಡೇಲ್ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಕರಿಬೈಲ್ ಆಯ್ಕೆ

Share This
ಮಜಿಬೈಲ್ : ಗೆಳೆಯರ ಬಳಗ (ರಿ) ಬಲ್ಲಂಗುಡೇಲ್, ಪಟ್ಟತ್ತಮೊಗರು ಇದರ ವಾರ್ಷಿಕ ಮಹಾಸಭೆಯು ಸಂಘದ ಮಾಜಿ ಅಧ್ಯಕ್ಷ ಹರಿಜೀವನ್ ದಾಸ್ ನೀರಹಳ್ಳಿಯವರ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ಜರಗಿತು.
ಸಂಘದ ಗೌರವಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಕರಿಬೈಲು, ಗೌರವ ಸಲಹೆಗಾರರಾಗಿ ಮೂಸ ಅಜ್ಜಿಹಿತ್ಲು, ಅಧ್ಯಕ್ಷರಾಗಿ ಉದಯ್ ಕುಮಾರ್ ಶೆಟ್ಟಿ ಕರಿಬೈಲು, ಉಪಾಧ್ಯಕ್ಷರಾಗಿ ಪ್ರಭಾಕರ ಶೆಟ್ಟಿ ಪನಂಬೆ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಮಜಿಬೈಲು, ಜೊತೆ ಕಾರ್ಯದರ್ಶಿಯಾಗಿ ನವೀನ್ಕುಮಾರ್ ಶೆಟ್ಟಿ ಮಾಯಿಪಾಡಿ, ಕೋಶಾಧಿಕಾರಿ ಬಶೀರ್ ಮೂಡಂಬೈಲು, ಲೆಕ್ಕ ಪರಿಶೋಧಕರಾಗಿ ಕಾರ್ತಿಕ್ ಶೆಟ್ಟಿ ಮಜಿಬೈಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಬಲ್ಲoಗುಡೇಲು, ಕ್ರೀಡಾ ಕಾರ್ಯದರ್ಶಿ ರಾಜೇಶ್ ಬಲ್ಲಂಗುಡೇಲು ಹಾಗೂ 11 ಮಂದಿಯನ್ನು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ಸಂಘದ ನೂತನ ಅದ್ಯಕ್ಷರಾದ ಉದಯಕುಮಾರ್ ಶೆಟ್ಟಿ ಕರಿಬೈಲ್ ಮಾತನಾಡಿ, ವೈಮನಸ್ಸು ಬಿಟ್ಟು ಜಾತಿ ಮತ ರಾಜಕೀಯವನ್ನು ದೂರವಿಟ್ಟು ನಮ್ಮ ಸಂಸ್ಥೆಯ ಎಲ್ಲಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಮ್ಮ ಸಂಘದ ಯಶಸ್ವಿಗೆ ಕಾರಣಕರ್ತರಾಗೋಣ ಎಂದು ವಿನಂತಿಸಿದರು. ಆನಂದ ಮಜಿಬೈಲ್ ಲೆಕ್ಕಪತ್ರ ಮಂಡಿಸಿದರು. ಜಯರಾಮ ಬಲ್ಲಂಗುಡೇಲ್ ಸ್ವಾಗತಿಸಿದರು. ವರದಿ:ವಿಜಯ್ ಕುಮಾರ್ ಶೆಟ್ಟಿ

Pages