ಬಂಟರ ಸಂಘ ಮುಂಬಯಿ ವಸಯಿ ಡಹಾಣು ಪ್ರಾದೇಶಿಕ ಸಮಿತಿ ದಶಮಾನೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಸಂಘ ಮುಂಬಯಿ ವಸಯಿ ಡಹಾಣು ಪ್ರಾದೇಶಿಕ ಸಮಿತಿ ದಶಮಾನೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Share This

ದಶಮಾನೋತ್ಸವ ಸಂಭ್ರಮವು ಗ್ರಾಮೀಣ ಪ್ರದೇಶದ ಸರ್ವ ಬಂಟರ ಏಕತೆಯ ಸಂಭ್ರಮವಾಗಲಿ : ಐಕಳ ಹರೀಶ್ ಶೆಟ್ಟಿ

BUNTS NEWS, ವಸಯಿ: ಬಂಟರ ಸಂಘ ಮುಂಬಯಿಯ 9ಪ್ರಾದೇಶಿಕ ಸಮಿತಿಗಳಲ್ಲೊಂದಾದ ವಸಯಿ ಡಹಾಣು ಪ್ರಾದೇಶಿಕ ಸಮಿತಿಯು 2009ರಲ್ಲಿ ನನ್ನ ಅಧ್ಯಕ್ಷೀಯ ಕಾರ್ಯಾವಧಿಯಲ್ಲಿ ಬಂಟರ ಸಂಘದ ಯೋಜನೆಗಳು ಗ್ರಾಮೀಣ ಪ್ರದೇಶವಾದ ವಸಯಿಯಿಂದ ಡಹಾಣುವರೆಗಿನ ಬಂಟ ಬಾಂಧವರಿಗೂ ದಕ್ಕಬೇಕು ಎನ್ನುವ ನೆಲೆಯಲ್ಲಿ ಸ್ಥಾಪಿತವಾಗಿದ್ದು ಇಂದು ತನ್ನ ದಶಮಾನೋತ್ಸವ ಸಂಭ್ರಮದಲ್ಲಿರುವುದು ಅತೀವ ಸಂತಸವೆನಿಸುತ್ತಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹೇಳಿದರು.
ಅವರು ವಸಯಿ ಪೂರ್ವದ ಗ್ಯಾಲಕ್ಸಿ ಸಭಾಂಗಣದಲ್ಲಿ ನ.11ರಂದು ಬಂಟರ ಸಂಘ ಮುಂಬಯಿ ಇದರ ವಸಯಿ ಡಹಾಣು ಪ್ರಾದೇಶಿಕ ಸಮಿತಿಯು ಅಯೋಜಿಸಿದ ದಶಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕಾ ಬಿಡುಗಡೆ ಸಮಾರಂಭದಲ್ಲಿ ದಶಮಾನೋತ್ಸವ ಸಂಭ್ರಮ 2019 ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಕಳೆದ ಹತ್ತು ವರುಷಗಳಲ್ಲಿ ನಿರಂತರವಾದ ಕಾರ್ಯ ಚಟುವಟಿಕೆಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಾದೇಶಿಕ ಸಮಿತಿಯು ವ್ಯವಸ್ಥಿತವಾದ ಕಾರ್ಯಕ್ರಮವನ್ನು ನೀಡುವಲ್ಲಿ ಸಫಲತೆಯನ್ನು ಕಂಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವಿಭಾಗದ ಸದಸ್ಯರು ಹಾಗೂ ಯುವ ವಿಭಾಗದ ಸದಸ್ಯರನ್ನು ಹೊಂದಿದ್ದು ದಶಮಾನೋತ್ಸವ ಸಂಭ್ರಮದ ಯಶಸ್ಸಿಗೆ  ಎಲ್ಲರೂ ಸಂಘಟಿತರಾಗಬೇಕು, ದಶಮಾನೋತ್ಸವ ಸಂಭ್ರಮವು ಮಾದರಿ ಕಾರ್ಯಕ್ರಮ ಎಂದೆಣಿಸಬೇಕು ಎಂದರು.

 ಬಂಟರ ಸಂಸ್ಕೃತಿ, ಸಂಪ್ರದಾಯ, ಸಂಸ್ಕಾರಗಳು ನಮ್ಮ ಮುಂದಿನ ಪೀಳಿಗೆಗೆ ತಿಳಿಯುವಂತೆ ನಾವು ಮಾಡಬೇಕು. ನನ್ನ ಕಾರ್ಯಾವಧಿಯಲ್ಲಿ ಆರಂಭಗೊಂಡ ಪ್ರಾದೇಶಿಕ ಸಮಿತಿಯ ದಶಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದ ವಸಯಿ ಡಹಾಣು ಪ್ರಾದೇಶಿಕ ಸಮಿತಿಯ ಸರ್ವ ಪದಾಧಿಕಾರಿಗಳಿಗೆ ಹೃದಯ ತುಂಬಿದ ಧನ್ಯವಾದಗಳು. ಯೋಗ್ಯ ಅತಿಥಿಗಳು, ಯೋಗ್ಯತಾವಂತರಿಗೆ ಸನ್ಮಾನ ಹಾಗೂ ವೈವಿಧ್ಯಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮವನ್ನು ಒಳಗೊಂಡ ದಶಮಾನೋತ್ಸವ ಸಂಭ್ರಮವು ಗ್ರಾಮೀಣ ಪ್ರದೇಶವಾದ ವಸಯಿಯಿಂದ ಡಹಾಣು ಪ್ರದೇಶದವರೆಗಿನ ಸರ್ವ ಬಂಟರ ಏಕತೆಯ ಸಂಭ್ರಮವಾಗಲೆಂದು ಶುಭ ಹಾರೈಸಿದರು.

ಅಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಸಂಚಾಲಕ ಶಶಿಧರ ಕೆ ಶೆಟ್ಟಿ, ದಶಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪಾಂಡು ಎಲ್ ಶೆಟ್ಟಿ, ಉಪಾಧ್ಯಕ್ಷ ಶಂಕರ ಕೆ ಆಳ್ವ ಅವರು ಸಂದರ್ಭೋಚಿತವಾಗಿ ಮಾತನಾಡಿ ತಮ್ಮ ಸೂಕ್ತ ಸಲಹೆ ಸೂಚನೆಗಳನ್ನಿತ್ತರು. ಈ ಸಂದರ್ಭದಲ್ಲಿ ದಶಮಾನೋತ್ಸವ ಸಂಭ್ರಮಕ್ಕೆ ಬೇಕಾಗುವ ವಿವಿಧ ಉಪ ಸಮಿತಿಗಳನ್ನು ರಚಿಸಿ ಜವಾಬ್ಧಾರಿಯನ್ನು ನೀಡಲಾಯಿತು. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್ ಆರ್ ಪಕ್ಕಳ ಅವರು ಸ್ವಾಗತಿಸಿದರೆ, ಗೌರವ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಕಣಂಜಾರು ಕಾರ್ಯಕ್ರಮ ನಿರೂಪಿಸಿದರು. 

ಶ್ರೀಮತಿ ಲೀಲಾವತಿ ಆಳ್ವ ಅವರು ಪ್ರಾರ್ಥಿಸಿದರು.  ವೇದಿಕೆಯಲ್ಲಿ ಸಲಹಾ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಹರೀಶ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಜಯ ಅಶೋಕ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಕಾರ್ಯಾಧ್ಯಕ್ಷೆ ಶ್ರೀಮತಿ ಮಂಜುಳಾ ಆನಂದ್ ಶೆಟ್ಟಿ, ಕೋಶಾಧಿಕಾರಿ ವಿಜಯ್ ಎಮ್ ಶೆಟ್ಟಿ ಜೊತೆ ಕಾರ್ಯದರ್ಶಿ ಜೆ ಡಿ ಶೆಟ್ಟಿ, ಜೊತೆ ಕೋಶಾಧಿಕಾರಿ ರತೀಶ್ ಶೆಟ್ಟಿ, ಯುವ ವಿಭಾಗದ ಸುಪ್ರೀತ್ ಶೆಟ್ಟಿ ನೀರೆ, ಕಾರ್ಯಕ್ರಮ ಸಂಚಾಲಕ ಹರೀಶ್ ಪಾಂಡು ಶೆಟ್ಟಿ, ಸದಸ್ಯತನ ಸಮಿತಿ ಕಾರ್ಯಾಧ್ಯಕ್ಷ ನವೀನ್ ಶೆಟ್ಟಿ, ಕ್ಯಾಟರಿಂಗ್ ಸಮಿತಿಯ ಕಾರ್ಯಾಧ್ಯಕ್ಷ ದಯಾನಂದ್ ಶೆಟ್ಟಿ, ವಿವಾಹ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಶೆಟ್ಟಿ ಕಾಪು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ನಾರಾಯಣ ಶೆಟ್ಟಿ ಅವರು ಉಪಸ್ಥಿತರಿದ್ದರು. ಮಹಿಳಾ ವಿಭಾಗ, ಯುವ ವಿಭಾಗ, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದ ಈ ಕಾರ್ಯಕ್ರಮದ ನಂತರ ಪ್ರೀತಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Pages