ಬಂಟರ ಯಾನೆ ನಾಡವರ ಮಾತೃ ಸಂಘದ ಚುನಾವಣೆ: ಅಜಿತ್‌ ಕುಮಾರ್‌ ರೈ ಮಾಲಾಡಿಗೆ ಗೆಲುವು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಯಾನೆ ನಾಡವರ ಮಾತೃ ಸಂಘದ ಚುನಾವಣೆ: ಅಜಿತ್‌ ಕುಮಾರ್‌ ರೈ ಮಾಲಾಡಿಗೆ ಗೆಲುವು

Share This
BUNTS NEWS, ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಸ್ಥಾನಕ್ಕೆ ಡಿ.8ರ ಭಾನುವಾರ ನಡೆದ ಚುನಾವಣೆಯಲ್ಲಿ ಅಜಿತ್ಕುಮಾರ್ರೈ ಮಾಲಾಡಿ ಅವರು ತಮ್ಮ ಪ್ರತಿಸ್ಪರ್ಧಿ ಸುರೇಶ್ಚಂದ್ರ ಶೆಟ್ಟಿ ಅವರ ವಿರುದ್ಧ 2598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅಜಿತ್ಕುಮಾರ್ರೈ ಮಾಲಾಡಿ ಅವರು 4,791 ಮತ ಗಳಿಸಿದರೆ, ಸುರೇಶ್ಚಂದ್ರ ಶೆಟ್ಟಿ ಅವರು 2193 ಮತ ಪಡೆದರು. ಮಂಗಳೂರು ತಾಲೂಕಿನಲ್ಲಿ ಮಹಿಳಾ ಮೀಸಲು ಸ್ಥಾನ ಸೇರಿಸಿ ಇತರ ಕಾರ್ಯಕಾರಿ ಸಮಿತಿ ಸ್ಥಾನಗಳಿಗೆ ಮತದಾನ ಇದೇ ಡಿ.13ರಂದು ನಡೆಯಲಿದೆ.

ಬಂಟರ ಮಾತೃಸಂಘದ ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿರುವ ಮಾಲಾಡಿ ಅಜಿತ್ ಕುಮಾರ್ ರೈ ಅವರಿಗೆ ಬಂಟ್ಸ್ ನ್ಯೂಸ್.ಕಾಂ ವತಿಯಿಂದ ಹಾರ್ದಿಕ ಅಭಿನಂದನೆಗಳು.

Pages