ಪ್ರಕಾಶಾಭಿನಂದನ ಸಮಾರಂಭ : ಉದ್ಯಮಿ ಕೆ. ಪ್ರಕಾಶ್ ಶೆಟ್ರಿಗೆ ಗಣ್ಯಾತಿಗಣ್ಯರಿಂದ ಶುಭ ಹಾರೈಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪ್ರಕಾಶಾಭಿನಂದನ ಸಮಾರಂಭ : ಉದ್ಯಮಿ ಕೆ. ಪ್ರಕಾಶ್ ಶೆಟ್ರಿಗೆ ಗಣ್ಯಾತಿಗಣ್ಯರಿಂದ ಶುಭ ಹಾರೈಕೆ

Share This
BUNTS NEWS, ಮಂಗಳೂರು: ಎಂಆರ್ಜಿ ಗ್ರೂಪ್ ಅಧ್ಯಕ್ಷ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಡಿ.25ರಂದು ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಮೈದಾನದಲ್ಲಿ ಸಂಭ್ರಮದ ಪ್ರಕಾಶಾಭಿನಂದನ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಈ ಸಂದರ್ಭ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಪ್ರಕಾಶ್ ಶೆಟ್ಟಿಯವರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕೆ.ಪ್ರಕಾಶ್ ಶೆಟ್ಟಿ -ಆಶಾ ಪ್ರಕಾಶ್ ಶೆಟ್ಟಿ ದಂಪತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭ ಪ್ರಕಾಶ್ ಶೆಟ್ಟಿಯವರು ಬೆಳ್ತಂಗಡಿಯ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 26 ಲಕ್ಷ ರೂ. ಮೊತ್ತದ ಚೆಕ್ ಶಾಸಕ ಹರೀಶ್ ಪೂಂಜರಿಗೆ ಹಸ್ತಾಂತರಿಸಿದರು. ಪ್ರಕಾಶ್ ಶೆಟ್ಟಿ ಸಾಧನೆ ಬಗ್ಗೆ ಕುಂದಾಪುರದ ಪ್ರತಾಪ್ ಶೆಟ್ಟಿ ಬರೆದ ‘ಹೊಂಬೆಳಕು’ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಲಾಯಿತು.

ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಶಿಮಂತೂರು ನಾರಾಯಣ ಶೆಟ್ಟಿ, ಅಪ್ಪಣ್ಣ ಹೆಗ್ಡೆ ಬಸ್ರೂರು, ಡಾ.ಸುನೀತಾ ಶೆಟ್ಟಿ ಮುಂಬೈ, ಡಾ.ಬಿ.ಎಂ.ಹೆಗ್ಡೆ, ಡಾ.ಚಂದ್ರಶೇಖರ ಶೆಟ್ಟಿ, ಜಯ ಸುವರ್ಣ, ಆರ್.ಎನ್.ಶೆಟ್ಟಿ, ಜಗನ್ನಾಥ್ ಶೆಟ್ಟಿ ಪೂನಾ, ಕೆ.ಗೋವಿಂದ ಭಟ್ ಸೂರಿಕುಮೇರು, ಬನ್ನಂಜೆ ಸಂಜೀವ ಸುವರ್ಣ, ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಬೋಳ ಸುಬ್ಬಯ್ಯ ಶೆಟ್ಟಿ, ನಾರಾಯಣ ರಾವ್ ಪಡುಬಿದ್ರಿ, ನಗರ ನಾರಾಯಣ ಶೆಣೈ, ಸಾರಾ ಅಬೂಬಕರ್ ಇವರನ್ನು ಸನ್ಮಾನಿಸಿ ತಲಾ 1 ಲಕ್ಷ ರೂ. ಮೊತ್ತದ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಚಲನಚಿತ್ರ ನಟರಾದ ರವಿಚಂದ್ರನ್, ಯಶ್, ಹರಿಪ್ರಿಯಾ, ಕಾವ್ಯಾ ಶೆಟ್ಟಿ, ವಿಧಾನಸಭೆ ಮುಖ್ಯ ಸಚೇತಕ ಸುನೀಲ್ ಕುಮಾರ್, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್, ಬಿ.ಎಂ.ಸುಕುಮಾರ ಶೆಟ್ಟಿ, ಯು.ರಾಜೇಶ್ ನಾಯ್ಕ ಬಂಟ್ವಾಳ, ಸಂಜೀವ ಮಠಂದೂರು, ಡಿ.ವೇದವ್ಯಾಸ ಕಾಮತ್, ಹರೀಶ್ ಪೂಂಜ, ಡಾ.ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವರಾದ ಕೆ.ಅಮರನಾಥ ಶೆಟ್ಟಿ, ಅಭಯಚಂದ್ರ ಜೈನ್, ಪ್ರಮೋದ್ ಮಧ್ವರಾಜ್, ಬಂಟರ ಯಾನೆ ನಾಡವರ ಮಾತೃ ಸಂಘ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಶ್ರೀದೇವಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ .ಸದಾನಂದ ಶೆಟ್ಟಿ, .ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷ .ಜೆ.ಶೆಟ್ಟಿ, ಆಳ್ವಾಸ್ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಭಂಡಾರಿ ಮಹಾಮಂಡಲ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಕಚ್ಚೂರು ನಾಗೇಶ್ವರ ದೇವಸ್ಥಾನ ಬಾರ್ಕೂರು ಆಡಳಿತ ಮೊಕ್ತೇಸರ ಸುರೇಶ್ ಭಂಡಾರಿ ಕಡಂದಲೆ ಭಾಗವಹಿಸಿದ್ದರು.

ಪ್ರಕಾಶಾಭಿನಂದನ ಸಮಿತಿ ಪ್ರಧಾನ ಸಂಚಾಲಕ ಸಂತೋಷ್ ವಿ.ಶೆಟ್ಟಿ ಪೂನಾ, ಕೋಶಾಧಿಕಾರಿ ಸುರೇಶ್ ಶೆಟ್ಟಿ ಪಡುಬಿದ್ರೆ, ..ಜಿಲ್ಲಾ ಸಂಚಾಲಕ ಸುರೇಶ್ಚಂದ್ರ ಶೆಟ್ಟಿ, ಉಡುಪಿ.. ಜಿಲ್ಲಾ ಸಂಚಾಲಕ ಮನೋಹರ ಎಸ್. ಶೆಟ್ಟಿ, ಉಪಾಧ್ಯಕ್ಷ ಪುರುಷೋತ್ತಮ ಪಿ.ಶೆಟ್ಟಿ, ಜಿ.ಸುಧೀರ್ ಹೆಗ್ಡೆ ಬೈಲೂರು, ದೇವಿಪ್ರಸಾದ್ ಶೆಟ್ಟಿ ಬೆಳಪು, ದೇವಾನಂದ ಎಂ.ಶೆಟ್ಟಿ, ಅರವಿಂದ ಪೂಂಜ ಮೂಲ್ಕಿ, ನಿಟ್ಟೆ ರವಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಕಾಶಾಭಿನಂದನ ಸಮಿತಿ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ವಂದಿಸಿದರು.

ಪ್ರಸಿದ್ಧ ಭಾಗವರತಾದ ಪಟ್ಲ ಸತೀಶ್ ಶೆಟ್ಟಿ, ಸುರೇಶ್ ಶೆಟ್ಟಿ ಶಂಕರನಾರಾಯಣ, ಜನ್ಸಾಲೆ ರಾಘವೇಂದ್ರ ಆಚಾರ್ ಮತ್ತು ಕಾವ್ಯಶ್ರೀ ಅಜೇರು ಇವರಿಂದ ಯಕ್ಷಗಾನ ವೈಭವ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್ ತಂಡದವರಿಂದ ಸಂಗೀತ ರಸಸಂಜೆ ನಡೆಯಿತು. ನಿತೇಶ್ ಶೆಟ್ಟಿ ಎಕ್ಕಾರ್, ರೂಪೇಶ್ ಶೆಟ್ಟಿ ಹಾಗೂ ಝೀ ಕನ್ನಡ ಖ್ಯಾತಿಯ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

Pages