ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್, ಇಡ್ಯಾ ಗ್ರಾಮಕ್ಕೆ ಸಮಗ್ರ ಪ್ರಶಸ್ತಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್, ಇಡ್ಯಾ ಗ್ರಾಮಕ್ಕೆ ಸಮಗ್ರ ಪ್ರಶಸ್ತಿ

Share This
BUNTS NEWS, ಸುರತ್ಕಲ್: ಬಂಟರ ಸಂಘ  ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘ  ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಜರಗಿದ ಬಂಟರ ಕ್ರೀಡೋತ್ಸವದಲ್ಲಿ ಸುರತ್ಕಲ್ ಮತ್ತು ಇಡ್ಯಾ ಗ್ರಾಮ  ಜಂಟಿಯಗಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಕ್ರೀಡೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿಯನ್ನು ವಿತರಿಸಿ ಕ್ರೀಡೆಯ ಮೂಲಕ ಸಮಾಜದ ಸಂಘಟನೆಯಾಗಲಿ. ಕ್ರೀಡೆಯಲ್ಲಿ  ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ಸಮಾಜ ಸಂಘಟನೆಯಲ್ಲೂ ಪ್ರಮುಖ ಪಾತ್ರ ವಹಿಸುವಂತೆ ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ  ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಬಂಟರ ಸಂಘದ ಅಧ್ಯಕ್ಷ ಸುಧಾಕರ  ಎಸ್. ಪೂಂಜ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ, ಗುರುಪುರ ಬಂಟರ ಮಾತೃ ಸಮಘದ ಅಧ್ಯಕ್ಷ  ರಾಜಕುಮಾರ್ ಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯ ವರುಣ್ ಚೌಟ ಭಾಗವಹಿಸಿದ್ದರು.

ಸಮಾರಂಭದಲ್ಲಿ ಮನಪಾ ಸದಸ್ಯ ವರುಣ್ ಚೌಟ, ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಕಾರ್ಯಕಾರಿ ಸಮಿತಿಗೆ ಆಯ್ಕೆಗೊಂಡಿರುವ ಉಲ್ಲಾಸ್  ಆರ್. ಶೆಟ್ಟಿ ಪೆರ್ಮುದೆ ಮತ್ತು ಜಗನ್ನಾಥ್ ಶೆಟ್ಟಿ ಬಾಳ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ, ಪ್ರಧಾನ ಕಾರ್ಯದರ್ಶಿ ಲೋಕಯ್ಯ ಶೆಟ್ಟಿ ಮುಂಚೂರು, ಜತೆ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಟರಾಜ ಶೆಟ್ಟಿ ಕುಡುಂಬೂರು, ಕ್ರೀಡಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷ ಬೇಬಿ ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಜೆ. ಶೆಟ್ಟಿ, ವೇದಾವತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Pages