ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Share This
ಮಂಗಳೂರು:  ದೇಶದ ಎಲ್ಲಾ ಪ್ರಜೆಗಳು ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳು ನಮ್ಮ ಸಂವಿಧಾನದ ಬಗ್ಗೆ ಅಧ್ಯಯನ ಮಾಡಬೇಕು, ರಾಷ್ಟ್ರದ ನೀತಿ-ನಿಯಮಗಳ ಚೌಕಟ್ಟಿನ ಅರಿವು ನಮಗಿರಬೇಕು, ಸಂವಿಧಾನ ರಚಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಿರ್ವಹಿಸಿದ್ದ ಜವಾಬ್ದಾರಿಯಷ್ಟೇ ನಮ್ಮ ಜಿಲ್ಲೆಯ ಬೆನಗಲ್ ನರಸಿಂಹರಾಯರು ವಹಿಸಿದ್ದರು ಎಂಬುದನ್ನು ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು. ಕಾಲೇಜಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಸಿದ ನ್ಯಾಯವಾದಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಶ್ರೀ ವಿವೇಕಾನಂದ ಪನಿಯಾಲ ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.
ಆರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮಾಗಾಂಧಿ ಹಾಗೂ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಹೂಎಸಳುಗಳನ್ನು ಅರ್ಪಿಸಿ ಗೌರವಾರ್ಪಣೆ ಸಲ್ಲಿಸಲಾಯಿತು. ಶಾಲಾ ವಿದ್ಯಾರ್ಥಿ ಚಿರಂತನಾ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ.ಸಿ.ನಾೈಕ್ ವಹಿಸಿದ್ದರು.

ಆರಂಭದಲ್ಲಿ ಕಾಲೇಜು ಪ್ರಾಚಾರ್ಯ ಪ್ರಭಾಕರ ಜಿ.ಎಸ್.ಸ್ವಾಗತಿಸಿ ಕೊನೆಯಲ್ಲಿ ಶಾಲಾ ಪ್ರಾಚಾರ್ಯೆ ವಿದ್ಯಾ ಕಾಮತ್ ಜಿ. ವಂದಿಸಿದರು. ಶಿಕ್ಷಕಿ ಸಂಗೀತಾ ಮರೀನಾ ಪೆರಿಸ್ ಕಾರ್ಯಕ್ರಮ ನಿರೂಪಿಸಿದರು.

Pages